ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ: ರಾಷ್ಟ್ರಪತಿ ರಾಮನಾಥ ಕೋವಿಂದ ಗೌರವ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ ಸ್ವಾಮೀಜಿಗೆ ಗೌರವ ಸಲ್ಲಿಸಿದರು.

ಆದಿ ಉಡುಪಿ ಹೆಲಿಪ್ಯಾಡ್​ನಿಂದ ರಸ್ತೆ ಮಾರ್ಗದ ಮೂಲಕ ಪೇಜಾವರ ಮಠಕ್ಕೆ ಆಗಮಿಸಿದ ರಾಷ್ಟ್ರಪತಿಗಳು ಪೇಜಾವರ ಸ್ವಾಮೀಜಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿ ಸ್ವಾಮೀಜಿಯ ಉತ್ತಮ ಆರೋಗ್ಯಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಶಾಲು, ಯಕ್ಷ ಕಿರೀಟ ತೊಡಿಸಿ ಸನ್ಮಾನಿಸಲಾಯಿತು. ಜತೆಗೆ ಶ್ರೀಕೃಷ್ಣ ಸಹಿತ ಬೆಳ್ಳಿ ಪ್ರಭಾವಳಿ ನೀಡಿ ಗೌರವಿಸಲಾಯಿತು.

ಬಳಿಕ ಶ್ರೀ ಕೃಷ್ಣನ ದರ್ಶನ ಪಡೆದ ರಾಷ್ಟ್ರಪತಿಗಳು ಕೃಷ್ಣಮಠ, ಮಧ್ವಾಚಾರ್ಯ ಮತ್ತು ಕನಕದಾಸರ ಬಗ್ಗೆ ಮಾಹಿತಿ ಪಡೆದರು. ನಂತರ 12.50 ಕ್ಕೆ ರಸ್ತೆ ಮಾರ್ಗದ ಮೂಲಕ ಆದಿ ಉಡುಪಿ ಹೆಲಿಪ್ಯಾಡ್​ಗೆ ತೆರಳಿದ ರಾಷ್ಟ್ರಪತಿಗಳು ಹೆಲಿಕ್ಯಾಪ್ಟರ್​ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿಂದ ದೆಹಲಿಗೆ ವಾಪಸಾದರು.

President Ramnath Kovind,Udupi,pejavara sri, Visits Sri Krishna Math

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ