ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಶೇಖ್ ಹಸೀನಾ ಅವರಿಗೆ ಪ್ರಧಾನಿ ಪಟ್ಟ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ನಡೆದ ಮತದಾನದಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಬೃಹತ್ ಮುನ್ನಡೆ ಸಾಧಿಸಿದ್ದಾರೆ. ಅವರ ಪಕ್ಷ ಕೂಡ ಮುನ್ನಡೆ ಕಾಯ್ದುಕೊಂಡಿರುವ ಕಾರಣ ಶೇಖ್ ಹಸೀನಾ ನಾಲ್ಕನೇ ಬಾರಿಗೆ ಬಾಂಗ್ಲಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ.

ಭಾನುವಾರ ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ಬಳಿಕ ಮತ ಎಣಿಕೆ ಕಾರ್ಯ ಆರಂಭವಾಯಿತು. ಗಾಯ್ಬಂಧನಾ-5 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಪ್ರಧಾನಿ ಶೇಖ್ ಹಸೀನಾ ಒಟ್ಟು 2,29,539 ಮತಗಳನ್ನು ಗಳಿಸಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದರು. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಎನ್​ಪಿಯ ಎಸ್.ಎಂ. ಜಿಲಾನಿ ಅವರಿಗೆ ಕೇವಲ 123 ಮತ ಲಭಿಸಿದೆ.

ಮತದಾನದ ವೇಳೆ ನಡೆದ ಹಿಂಸಾಚಾರದಲ್ಲಿ ,ವಿವಿಧ ಪ್ರಕರಣಗಳಲ್ಲಿ ಒಟ್ಟೂ 17 ಜನರು ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಮತದಾನದ ವೇಳೆ ತಮ್ಮ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಆಡಳಿತಾರೂಢ ಅವಾಮಿ ಲೀಗ್​ನ ಕಾರ್ಯಕರ್ತರು ದಾಳಿ ನಡೆಸಿದ್ದರು.

ಮತಗಟ್ಟೆಗಳನ್ನು ವಶಪಡಿಸಿ ಕೊಂಡು ಭಾರಿ ಅಕ್ರಮ ಎಸಗಿದ್ದಾಗಿ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನ ಲಿಸ್ಟ್ ಪಾರ್ಟಿ (ಬಿಎನ್​ಪಿ) ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಬಿಎನ್​ಪಿ ನೇತೃತ್ವದ ಮೈತ್ರಿಕೂಟ ಮತದಾನ ಪ್ರಕ್ರಿಯೆ ಬಹಿಷ್ಕರಿಸುವುದಾಗಿ ಘೋಷಿಸಿತ್ತು. ಮರುಚುನಾವಣೆಗೂ ಆಗ್ರಹಿಸಿದೆ.

ಇನ್ನು ಭಾನುವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಯಿತು. ಢಾಕಾ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಶೇಖ್ ಹಸೀನಾ ಹಕ್ಕು ಚಲಾಯಿಸಿದರು. ಈ ಕ್ಷೇತ್ರದಲ್ಲಿ ಹಸೀನಾ ಅವರ ಸಹೋದರ ಸಂಬಂಧಿ ಫಜ್ಲೆ ನೂರ್ ತಪೋಶ್ ಅವಾಮಿ ಲೀಗ್​ನಿಂದ ಕಣಕ್ಕಿಳಿದಿದ್ದಾರೆ. ಚುನಾವಣೆ ಸಂಬಂಧಿತ ಗಲಭೆಗಳಲ್ಲಿ ಅವಾಮಿ ಲೀಗ್ ಕಾರ್ಯಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಚತ್ತೋಗ್ರಾಮ್ಲ್ಲಿ ಬಿಎನ್​ಪಿ ಕಾರ್ಯಕರ್ತನನ್ನು ಅವಾಮಿ ಲೀಗ್ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ.

ಬಿಎನ್​ಪಿಯ 6 ಅಭ್ಯರ್ಥಿಗಳು ಸೇರಿ ಒಟ್ಟು 7 ಅಭ್ಯರ್ಥಿಗಳು ಚುನಾವಣೆ ಪ್ರಕ್ರಿಯೆಯನ್ನು ಬಹಿಷ್ಕರಿಸ್ ಘೋಷಿದ್ದಾರೆ. ಮತಗಟ್ಟೆಗಳನ್ನು ವಶಪಡಿಸಿಕೊಂಡಿರುವ ಅವಾಮಿ ಲೀಗ್ ಕಾರ್ಯಕರ್ತರು ಭಾರಿ ಅಕ್ರಮ ಎಸಗುತ್ತಿರುವುದಾಗಿ ಆರೋಪಿಸಿದೆ. ಇದೇ ಕಾರಣ ನೀಡಿ ಬಿಎನ್​ಪಿ ಮತ್ತು ಮೈತ್ರಿಕೂಟದ ಎಲ್ಲ 13 ಪಕ್ಷಗಳು ಕೂಡ ಚುನಾವಣೆಯನ್ನು ಬಹಿಷ್ಕರಿಸಿರುವುದಾಗಿ ಹೇಳಿದೆ.

ಬಾಂಗ್ಲಾದೇಶದ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗಿತ್ತು.

PM Modi,congratulates Sheikh Hasina,electoral victory

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ