ಹೊಸ ವರ್ಷಾಚರಣೆ ಹಿನ್ನಲೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಬೆಂಗಳೂರು,ಡಿ.31- ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಇಂದು ಮಧ್ಯರಾತ್ರಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹೊಸ ವರ್ಷಾಚರಣೆಯಲ್ಲಿ ತೊಡಗಲಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಖಾಕಿ ಕಟ್ಟೆಚ್ಚರ ವಹಿಸಲಾಗಿದೆ.

ಇದೇ ವೇಳೆ ಭಯೋತ್ಪಾದಕರು ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳು ದಟ್ಟವಾಗಿದ್ದು ಎಲ್ಲೆಡೆ ನಿಗಾ ವಹಿಸಲಾಗಿದೆ.

ಬೆಳಗಾವಿ, ಮೈಸೂರು, ಹುಬ್ಬಳ್ಳಿ -ಧಾರವಾಡ, ತುಮಕೂರು, ಚಿಕ್ಕಮಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಸಂಜೆಯಿಂದಲೇ ಪೆÇಲೀಸ್ ಪಡೆಗಳೇ ಮೊಕ್ಕಾಂ ಹೂಡಿವೆ.

ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಜಯನಗರ, ಚರ್ಚ್‍ಸ್ಟ್ರೀಟ್, ಮಾರತ್ ಹಳ್ಳಿ, ಇಂದಿರಾನಗರ ಮತ್ತಿತರ ಕಡೆ ಸುಮಾರು 15 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಎಲ್ಲೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.ಅಲ್ಲದೇ ಮಫ್ತಿಯಲ್ಲೂ ಪೊಲೀಸರು ನಿಗಾ ವಹಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ಕಳೆದ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಹಲವೆಡೆ ಯುವತಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಈ ಬಾರಿ ಇಂತಹ ಘಟನೆಗಳು ಮರುಕಳಿಸಬಾರದೆಂಬ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಮಫ್ತಿಯಲ್ಲಿ ಮಹಿಳಾ ಪೊಲೀಸರು ಕಾರ್ಯ ನಿರ್ವಹಿಸುವುದಲ್ಲದೆ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಿಸಿ ಟಿವಿಗಳು, 2500 ವಾಹನಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದಾರೆ.

ಮದ್ಯದ ಮತ್ತೇರಿ ಕುಣಿಯುವವರು, ಎಚ್ಚರ ತಪ್ಪಿ ಬೀಳುವವರು ಟಿವಿಯಲ್ಲಿ ಬರುವ ಸಾಧ್ಯತೆಯಿದೆ ಎಚ್ಚರದಿಂದಿರಿ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ