ವಿವಾದವಿರುವುದು ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿ ಹೊರತು ರಫೇಲ್ ವಿಮಾನ ಖರೀದಿ ಒಪ್ಪಂದದಲ್ಲಲ್ಲ: ಸುಷ್ಮಾ ಸ್ವರಾಜ್

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಹೊರತು ಬೇರಾರಲ್ಲೂ ವಿವಾದವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಸಂಸತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷರ ನಡುವೆ 2015ರ ಏಪ್ರಿಲ್ 10 ರಂದು ನಡೆದ ಮಾತುಕತೆಯನ್ನು ಪ್ರಸ್ತಾಪಿಸಿ, ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್, ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಯಾವುದೇ ವಿವಾದಗಳಿಲ್ಲ. ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಹೊರತಿ ವಿಮಾನ ಖರೀದಿ ಒಪ್ಪಂದದಲ್ಲಲ್ಲ ಎಂದು ಹೇಳಿದ್ದಾರೆ.

ರಫೇಲ್ ಒಪ್ಪಂದ ಕುರಿತು ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಹೀಗಿರುವಾಗ ಕಾಂಗ್ರೆಸ್ ತನ್ನ ಆರೋಪವನ್ನು ಮುಂದುವರೆಸಿದರೆ, ವಾಸ್ತವದಲ್ಲಿ ಇಲ್ಲದೇ ಇರುವ ಹಗರಣವನ್ನು ಕಾಂಗ್ರೆಸ್ ಮನಸ್ಸಿನಲ್ಲಿ ಇಟ್ಟುಕೊಂಡಿದೆ ಎಂದರ್ಥ. ಕಾಂಗ್ರೆಸ್ ನಾಯಕರು ರಫೇಲ್ ವಿವಾದವನ್ನು ಇಟ್ಟುಕೊಂಡು ಪ್ರತೀನಿತ್ಯ ಬೊಬ್ಬೆ ಹೊಡೆಯುತ್ತಿದ್ದಾರೆ. ಇದರಿಂದಾಗಿ ಸಂಸತ್ ಕಲಾಪ ಹಳಾಗುತ್ತಿದೆ ಎಂದು ಕಿಡಿಕಾರಿದರು.

ಅತ್ಯುನ್ನತ ಮಟ್ಟದ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಯಾವುದೇ ವಿವಾದಗಳಿಲ್ಲ ಎಂಬುದು ಇಡೀ ದೇಶಕ್ಕೆ ತಿಳಿದಿದೆ. ಆದರೆ ಕಾಂಗ್ರೆಸ್ ಮಾತ್ರ ಈ ವಿಚಾರದಲ್ಲಿ ರಾಜಕೀಯಮಾಡುತ್ತಾ ಸಂಸತ್ ಕಲಾಪವನ್ನು ವ್ಯರ್ಥಮಾಡುತ್ತಿದೆ ಎಂದು ಗುಡುಗಿದರು.

Parliament,Loka sabha, Rafale deal,Sushma swaraj

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ