ಕೋಲಾರದಲ್ಲಿ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಕೋಲಾರ,ಜ.8-ವರ್ಷದ ಮೊದಲ ಬಂದ್‍ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನಾಕಾರರು ರಸ್ತೆಗಿಳಿದು, ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಬೈಕ್ ರ್ಯಾಲಿ ಮೂಲಕ ಪ್ರತಿಭಟನಾಕಾರರು ತೆರಳಿ ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ಬೆಳಗ್ಗೆ ವೇಳೆ ಆಟೋ ಸಂಚಾರ ಎಂದಿನಂತೆ ಇದ್ದರೂ ಮಧ್ಯಾಹ್ನದ ವೇಳೆ ವಿರಳವಾಗಿತ್ತು.

ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಘೋಷಣೆಗಳನ್ನು ಕೂಗಿದರು. ನ್ಯಾಯಾಲಯದಲ್ಲಿ ಎಂದಿನಂತೆ ಕಲಾಪಗಳು ನಡೆಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ