ಮಧ್ಯಪ್ರದೇಶ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಹುನ್ನಾರ; ಕೈ ಶಾಸಕರಿಗೆ 100 ಕೋಟಿ ಆಮಿಷ

ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ತಂತ್ರ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 15 ವರ್ಷಗಳ ಬಳಿಕ ಕಾಂಗ್ರೆಸ್‌ ಅಧಿಕಾರಕ್ಕೇರಿರುವ ಹಿನ್ನಲೆಯಲ್ಲಿ ಈಗ ವಿರೋಧ ಪಕ್ಷವಾಗಿರುವ ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪಕ್ಷದ ಪ್ರಮುಖ ನಾಯಕರೇ ಸರ್ಕಾರವನ್ನು ಬೀಳಿಸಲು ನಮ್ಮ ಶಾಸಕರಿಗೆ ಕೋಟಿಗಟ್ಟಲೆ ಹಣದ ಆಮಿಷವನ್ನೊಡ್ಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯು ಪ್ರತಿ ಶಾಸಕನಿಗೆ 5 ರಿಂದ 10 ಕೋಟಿ ರೂ.ಗಳ ಆಮಿಷವೊಡ್ಡುತ್ತಿದ್ದು, ಆ ಶಾಸಕರು ಯಾರೆಂಬುದನ್ನು ಕೂಡ ನಾನು ಹೇಳಬಲ್ಲೆ. ಆದರೆ, ನಮ್ಮ ಯಾವುದೇ ಶಾಸಕರು ಕೂಡ ಆಮಿಷಕ್ಕೆ ಬಲಿಯಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದು ತಿಳಿಸಿದರು.

ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ದಿಗ್ವಿಜಯ್‌ ಸಿಂಗ್‌ ಅವರು ಮಾಡುತ್ತಿರುವ ಆರೋಪವನ್ನು ಸಾಬೀತುಪಡಿಸಲಿ. ಮಧ್ಯಪ್ರದೇಶದ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದಿದೆ.

BJP offering Rs 100 crore to Madhya Pradesh Congress MLAs to topple govt: Digvijaya Singh

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ