ಜನಸಂಖ್ಯಾ ನಿಯಂತ್ರಣಕ್ಕೆ ಬಾಬಾ ರಾಮದೇವ್ ನೀಡಿದ ಉಪಾಯವೇನು ಗೊತ್ತೇ…?

ನವದೆಹಲಿ: ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಗತ್ತಿನ ಎಲ್ಲ ರಾಷ್ಟ್ರಗಳನ್ನು ಮೀರಿ ವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಯೋಗ ಗುರು ಬಾಬಾ ರಾಮ್​ ದೇವ್ ಒಂದು ಉಪಾಯವನ್ನು ಹೇಳಿದ್ದು, ಎರಡಿಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮತದಾನಹಕ್ಕು, ಸರ್ಕಾರಿ ಸೌಲಭ್ಯ ಹಾಗೂ ಸರಕಾರಿ ನೌಕರಿಯನ್ನು ನಿಷೇಧಿಸಬೇಕು ಎಂದು ತಿಳಿಸಿದ್ದಾರೆ.

ದೇಶದಲ್ಲಿ ಯಾರೆಲ್ಲ ಇಬ್ಬರಿಗಿಂತಲೂ ಹೆಚ್ಚು ಮಕ್ಕಳನ್ನು ಹೊಂದುವರೋ ಅವರಿಂದ ಮತದಾನದ ಹಕ್ಕನ್ನು ಕಿತ್ತುಕೊಳ್ಳಬೇಕು. ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು. ಅವರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಸೀಟು ನೀಡಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ನೀಡಬಾರದು. ಅವರಿಗೆ ಸರ್ಕಾರಿ ನೌಕರಿ ನೀಡಬಾರದು ಎಂದು ರಾಮದೇವ್ ಹೇಳಿದ್ದಾರೆ.

ಈ ಕ್ರಮಗಳನ್ನು ಕೈಗೊಂದಲ್ಲಿ ದೇಶದ ಜನಸಂಖ್ಯೆ ತಾನಾಗಿಯೇ ನಿಯಂತ್ರಣಕ್ಕೆ ಬರಲಿದೆ ಎಂದು ಬಾಬಾ ರಾಮದೇವ್ ತಿಳಿಸಿದ್ದಾರೆ.

Baba Ramdev,No voting rights for people with more than two children

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ