ನಮ್ಮ ಸತ್ಯಾಗ್ರಹ ತನಿಖಾ ಸಂಸ್ಥೆಗಳ ವಿರುದ್ಧವಲ್ಲ; ಪ್ರಧಾನಿ ಮೋದಿ ದೌರ್ಜ್ಯನ್ಯಗಳ ವಿರುದ್ಧ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನಮ್ಮ ಸತ್ಯಾಗ್ರಹ, ಹೋರಾಟ ಯಾವುದೇ ತನಿಖಾ ಸಂಸ್ಥೆಗಳ ವಿರುದ್ಧವಲ್ಲ; ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದೌರ್ಜನ್ಯಗಳ ವಿರುದ್ಧ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ಎರಡನೇ ದಿನಕ್ಕೆ ಕಾಲಿಟಿದ್ದು ಈ ವೇಳೆ ಮಾತನಾಡಿದ ಬ್ಯಾನರ್ಜಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತಾ ಶಾ ಅವರು ಪಶ್ಚಿಮ ಬಂಗಾಳ ಆಡಳಿತದ ಮೇಲೆ ದಾಳಿ ನಡೆಸುತ್ತಿದ್ದು, ಸಮಸ್ಯೆ ಪರಿಹಾರಗೊಳ್ಳುವವರೆಗೆ ತಾನು ಧರಣಿ ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಸಿಬಿಐ ಹಾಗೂ ಬ್ಯಾನರ್ಜಿ ಸರ್ಕಾರದ ನಡುವಿನ ಜಟಾಪಟಿ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಟಿಎಂಸಿ ಸದಸ್ಯರು ಬಿಜೆಪಿ ಹಟಾವೋ ಎಂದು ಘೋಷಣೆ ಕೂಗಿದರು.

ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ವಿಚಾರಣೆ ನಡೆಸಲು ಮುಂದಾದ ಸಿಬಿಐ ಕ್ರಮವನ್ನು ಖಂಡಿಸಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಕೋಲ್ಕತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಆಹೋರಾತ್ರಿ ಧರಣಿ ಆರಂಭಿಸುತ್ತಿದ್ದಂತೆಯೇ ಇತ್ತ ಟ್ವಿಟರ್ ನಲ್ಲಿ ಪ್ರತಿಪಕ್ಷ ನಾಯಕರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ದೀದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

Mamata Banerjee Protest, Kolkata,PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ