ಕಲಬೆರಿಕೆ ಮದ್ಯಸೇವನೆ; 30 ಜನ ಬಲಿ

ಲಖನೌ: ಕಲಬೆರಿಕೆ ಸಾರಾಯಿ ಕುಡಿದು 30ಕ್ಕೂ ಹೆಚ್ಚು ಮಂದಿ ಮೃತಟ್ಟಿರುವ ಘಟನೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ್ಲಲಿ ನಡೆದಿದೆ.

ಉತ್ತರ ಪ್ರದೇಶದ ಶರಣಪುರ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು 16 ಮಂದಿ ಮೃತಪಟ್ಟಿದ್ದು, ಉತ್ತರಾಖಂಡದ ಹರಿದ್ವಾರದಲ್ಲಿ 14ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಮೌನಿ ಅಮವ್ಯಾಸೆ ಪ್ರಯುಕ್ತ ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ಈ ಕಲಬೆರಕೆ ಮದ್ಯವನ್ನು ಸೇವಿಸಿದ್ದರು ಈ ಹಿನ್ನಲೆಯಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದು, ಅಸ್ವಸ್ಥರಿಗೆ ತಕ್ಷಣವೇ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಸೂಚಿಸಿದ್ದಾರೆ. ಅಲ್ಲದೆ ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ರುಪಾಯಿಗಳು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರ ಸಂಬಂಧಿಗಳಿಗೆ ತಲಾ 50 ಸಾವಿರ ರುಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಯೋಗಿ ಅವರು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ.

ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಬಕಾರಿ ಇನ್ ಸ್ಪೆಕ್ಟರ್ ಗಳನ್ನು, ಇಬ್ಬರು ಹೆಡ್ ಕಾನ್ ಸ್ಟೇಬಲ್ ಗಳನ್ನು ಹಾಗೂ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.

ಇನ್ನು ಹರಿದ್ವಾರದಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮವೊಂದಕ್ಕೆಂದು ತಯಾರಿಸಲಾಗಿದ್ದ ಕಳ್ಳಬಟ್ಟಿ ಕುಡಿದು ಈ ದುರಂತ ಸಂಭವಿಸಿದೆ ಎಂದು ಉತ್ತರಾಖಂಡ ಅಬಕಾರಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. ದುರಂತ ಹಿನ್ನಲೆಯಲ್ಲಿ ಉತ್ತರಾಖಂಡ ಸರ್ಕಾರ, ಅಬಕಾರಿ ಇಲಾಖೆಯ 13 ಅಧಿಕಾರಿಗಳನ್ಮು ಅಮಾನತುಗೊಳಿಸಿದೆ.
Spurious liquor case,Uttara Pradesh,uttarakhand,30 dead

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ