80 ಅಡಿ ಕಂದಕಕ್ಕೆ ಉರುಳಿದ ಕಾರು: ನಾಲ್ವರ ದುರ್ಮರಣ

ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಹಿರೆಬೈಲು ಗ್ರಾಮದ ಬಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಮಂಗಳೂರಿನ ಸುಳ್ಯ ಮೂಲದವರಾಗಿದ್ದು, ಯಕ್ಷಗಾನ ನೋಡಲೆಂದು ಹಿರೆಬೈಲಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ ಇಬ್ಬರನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿದೆ.

Chikkamagalore, car accident,four dead

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ