ಚಾಲಕರು ನೆಮ್ಮದಿಯ ಬದುಕು ಸಾಗಿಸುವಂತಾಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಆಟೋ, ಲಾರಿ, ಟ್ಯಾಕ್ಸಿಯಂತಹ ವಾಹನಗಳ ಚಾಲಕರು ನೆಮ್ಮದಿಯ ಬದುಕು ಸಾಗಿಸುವ ಕಾರ್ಯಕ್ರಮ ಕೊಡುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯಿಂದ ವಿಧಾನಸೌಧದ ಮುಂದೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಇತರೆ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಫಲಾನುಭವಿ ಯುವಕ, ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಶ್ರಮಿಕ ವರ್ಗದವರು ಉತ್ತಮ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರಕ್ಕಿದೆ. ಈ ನಿಟ್ಟಿನಲ್ಲಿ ಈ ವರ್ಗಕ್ಕೆ ಅನುಕೂಲ ಕಲ್ಪಿಸುವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು.

ಚಾಲಕರು ಜಾಗೃತಿಯಿಂದ ತಮ್ಮ ಕೆಲಸ ನಿರ್ವಹಿಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ