ನಾಗರಹೊಳೆ, ಬಂಡೀಪುರ ರಾಷ್ಟ್ರೀಯ ಉದ್ಯಾನಗಳಲ್ಲಿ ಕಾಡ್ಗಿಚ್ಚು: ಬಂಡಿಪುರದಲ್ಲಿ ಹುಲಿ ಸಫಾರಿ ತಾತ್ಕಾಲಿಕ ಬಂದ್

ಚಾಮರಾಜನಗರ: ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿವೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಅಂದಾಜು 40 ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಅಂದಾಜು 250ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಕಿಯಿಂದಾಗಿ ನೂರಾರು ಪ್ರಾಣಿ, ಪಕ್ಷಿಗಳು ಕೂಡ ಬಲಿಯಾಗಿವೆ ಎನ್ನಲಾಗಿದೆ.

ಇನ್ನು ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ 5 ಸಾವಿರ ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದ್ದು, ಸಂಪೂರ್ಣ ಭಸ್ಮವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಒಂದು ವಾರ ಹುಲಿ ಸಫಾರಿಯನ್ನು ಬಂದ್​ ಮಾಡಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳೀಯ ಸ್ವಯಂಸೇವಕರು ಕೂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬಂದಿಲ್ಲ.

Forest fire,Bandipur Tiger Reserve,nagarahole

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ