ಏರ್ ಶೋ ದರಂತಕ್ಕೆ ಪುಲ್ವಾಮ ಲಿಂಕ್ ಕೊಟ್ಟ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು: ಪುಲ್ವಾಮಾ ಉಗ್ರರ ದಾಳಿಗೂ ಏರ್ ಶೋ ಕಾರು ದುರಂತಕ್ಕೂ ಲಿಂಕ್ ಇದೆ ಎಂಬ ಅನುಮಾನವಿದೆ ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಯಲಹಂಕ ವಾಯುನೆಲೆಯ ಏರ್ ಶೋ ಪ್ರದರ್ಶನದ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೂ, ಪುಲ್ವಾಮಾದಲಿ ನಡೆದ ಉಗ್ರರ ದಾಳಿಗೂ ಏನಾದರೂ ಲಿಂಕ್ ಇರಬಹುದೇ. ಯಾವ ಕಾರಣಕ್ಕಾಗಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಬಿದ್ದಿದೆ…? ಯಾರಾದರೂ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆಯೇ ಎಂಬುದೆಲ್ಲವನ್ನೂ ರಾಜ್ಯ ಸರ್ಕಾರ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಸಂಸದೆ ಆಗ್ರಹಿಸಿದ್ದಾರೆ.

ಈ ನಡುವೆ ಬಿಜೆಪಿ ನಾಯಕರ ಈ ರೀತಿಯ ಅನುಮಾನ, ಹೇಳಿಕೆಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶೋಭಾ ಕರಂದ್ಲಾಜೆ ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ಬಿಟ್ಟು, ಜವಾಬ್ದಾರಿಯಿಂದ ಮಾತನಾಡಬೇಕು ಎಂದು ತಿಳಿಸಿದ್ದಾರೆ.

ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶೋಭಾ ಕರಂದ್ಲಾಜೆ, ಬೆಂಕಿ ಅವಘಡದ ಬಗ್ಗೆ ರಾಜ್ಯ ಸರ್ಕಾರ ಉತ್ತರ ಕೊಡಬೇಕು ಎಂದಿದ್ದಾರೆ.

Shobha karandlaje,BJP,Air Show fire,pulwama terror attack,link

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ