ರಾಜ್ಯಾದ್ಯಂತ ಕಮಲ ಸಂದೇಶ ಬೈಕ್ ರ್ಯಾಲಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯಪಕ್ಶಗಳ ಚಟುವಟಿಕೆಗಳು ಗರಿಗೆದರಿದೆ. ಬಿಜೆಪಿ ಯುವ ಮೋರ್ಚಾವತಿಯಿಂದ ರಾಜ್ಯಾದ್ಯಂತ ಕಮಲ ಸಂದೇಶ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

ತುಮಕೂರಿನಲ್ಲಿ ನಡೆದ ಬೈಕ್ ರ್ಯಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಬಳಿಕ ಬೈಕ್ ರ್ಯಾಲಿ ಜತೆಗೆ ಬಿಎಸ್ ಯಡಿಯೂರಪ್ಪ ತೆರೆದವಾಹನದಲ್ಲಿ ಮೆರವಣಿಗೆ ಮೂಲಕ ಸಾಗಿದರು.

ಬೆಂಗಳೂರಿನ ಗಾಂಧೀನಗರ ಕ್ಷೇತ್ರದಲ್ಲಿ ನಡೆದ ಕಮಲ ಸಂದೇಶ ಬೈಕ್ ರ್ಯಾಲಿಯಲ್ಲಿ ರಾಜ್ಯಸಭಾ ಸದಸ್ಯರಾದ ರಾಜೀವ್ ಚಂದ್ರಶೇಖರ್, ಸಂಸದರಾದ ಪಿ.ಸಿ.ಮೋಹನ್,ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,ರಾಜ್ಯ ಬಿಜೆಪಿ ಖಜಾಂಚಿ ಸುಬ್ಬಣ್ಣ ,ಮಹಾನಗರ ಯುವಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ ಮತ್ತಿತರರು ಭಾಗವಹಿಸಿದ್ದರು.

ಮಹದೇವಪುರ ಕ್ಷೇತ್ರದಲ್ಲಿ ನಡೆದ ಬೈಕ್ ರ್ಯಾಲಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕ್ಷೇತ್ರದ ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ ಅವರು ಭಾಗವಹಿಸಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಚಿತ್ರದುರ್ಗದಲ್ಲಿ ಕಮಲ ಸಂದೇಶ ಬೈಕ್ ರ್ಯಾಲಿಗೆ ಜಿಲ್ಲಾಧ್ಯಕ್ಷರಾದ ನವೀನ್, ಶಾಸಕರಾದ ತಿಪ್ಪಾರೆಡ್ಡಿ ಮಾಜಿ ಶಾಸಕರಾದ ಮಾನಪ್ಪ ವಜ್ಜಲ್ ಅವರು ಚಾಲನೆ ನೀಡಿದರು.

ಭಾರತೀಯ ಜನತಾ ಪಕ್ಷದ ಯುವಮೋರ್ಚಾ ವತಿಯಿಂದ ಇಂದು ರಾಯಚೂರಿನಲ್ಲಿ ಬೃಹತ್ ಬೈಕ್ ರ್ಯಾಲಿಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಚೇತನ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ. ಎನ್. ಶಂಕ್ರಪ್ಪ ಮತ್ತಿತರರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ