ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸಾಮಿ ಹೆಸರು ಅಧಿಕೃತ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುತ್ತಿದ್ದು, ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಆದೇಶದಂತೆ ಶುಭ ಲಗ್ನದಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ ಎಸ್ ಪುಟ್ಟರಾಜು ಘೋಷಿಸಿದರು.

ಸಮಾವೇಶದ ವೇದಿಕೆಯ ಮೇಲೆ ಅಭ್ಯರ್ಥಿ ಇರುವಾಗಲೇ ನಾಯಕರು ಹೆಸರನ್ನು ಘೋಷಿಸುವುದು ಸಾಮಾನ್ಯ ಆದರೆ ಮಂಡ್ಯ ಸಮಾವೇಶ ಆರಂಭಕ್ಕೂ ಮೊದಲೇ ಸಚಿವ ಪುಟ್ಟರಾಜು ಅವರು ನಿಖಿಲ್ ವೇದಿಕೆಗೆ ಆಗಮಿಸುವ ಮುನ್ನವೇ ಮಧ್ಯಾಹ್ನ 12 ಗಂಟೆಯ ಒಳಗಡೆ ಹೆಸರನ್ನು ಘೋಷಿಸಿದರು. ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಸೂಚನೆಯಂತೆ ನಿಖಿಲ್ ಹೆಸರು ಪ್ರಕಟಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

lok sabha election,JDS,mandya,nikhil kumaraswamy

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ