ಸಾಲ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ

ನೆಲಮಂಗಲ, ಮಾ.18-ಕ್ಯಾಂಟರ್ ವಾಹನದ ಸಾಲದ ಕಂತುಗಳನ್ನು ಪಾವತಿಸಲಾಗದೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ನಡೆದಿದೆ.

ಅರುಣ್‍ಕುಮಾರ್(28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಕ್ಯಾಂಟರ್ ವಾಹನ ಖರೀದಿಗೆ ಖಾಸಗಿ ಕಂಪೆನಿಯೊಂದರಲ್ಲಿ ಫೈನಾನ್ಸ್ ಪಡೆದು ವಾಹನ ಖರೀದಿಸಿ ಬಾಡಿಗೆಗೆ ಬಿಟ್ಟಿದ್ದರು. ತಿಂಗಳು, ತಿಂಗಳು ಇಂತಿಷ್ಟು ಕಂತುಗಳಲ್ಲಿ ಹಣವನ್ನು ಸಾಲಕ್ಕೆ ಪಾವತಿಸುತ್ತಿದ್ದರು. ಆದರೆ ಕೆಲ ತಿಂಗಳುಗಳಿಂದ ಪಾವತಿಸದ ಕಾರಣ ಕಂಪನಿಯವರು ವಾಹನವನ್ನು ವಶಕ್ಕೆ ಪಡೆದಿದ್ದರು.

ಇದರಿಂದ ಮನನೊಂದ ಅರುಣ್‍ಕುಮಾರ್ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಟುಂಬ ಸದಸ್ಯರು ಕೊಟ್ಟಿಗೆ ಬಳಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ