ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಆತ್ನಹತ್ಯೆಗೆ ಶರಣು

ಚನ್ನಪಟ್ಟಣ, ಮಾ.19- ಜೀವನದಲ್ಲಿ ಜಿಗುಪ್ಸೆಗೊಂಡ ಪದವೀಧರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಿರಣ್‍ಕುಮಾರ್ (23) ಎಂದು ತಿಳಿದುಬಂದಿದ್ದು, ಎಂಕೆ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮದ ಜಯರಾಮು ಎಂಬುವವರ ಪುತ್ರನಾದ ಈತ ಬಿಕಾಂ ಪದವೀಧರನಾಗಿದ್ದ.

ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತ ತಮ್ಮ ತೋಟದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನೇಣು ಹಾಕಿಕೊಳ್ಳುವುದನ್ನು ಗಮನಿಸಿದ ಸ್ಥಳೀಯರು ಸಾವು-ಬದುಕಿನ ಜತೆ ಹೋರಾಟ ನಡೆಸುತ್ತಿದ್ದ ಆತನನ್ನು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಆತನ ದೇಹ ಸ್ಥಿತಿ ಗಂಭೀರವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ. ಕೂಡಲೇ ಪೋಷಕರು ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಲು ಮುಂದಾದಾಗ ಯುವಕ ಕೊನೆಯುಸಿರೆಳೆದಿದ್ದಾನೆ.

ಈ ಪ್ರಕರಣದ ಬಗ್ಗೆ ಎಂಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್‍ಐ ವಂಸಂತ್ ಕುಮಾರ್ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ