ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಮೈಸೂರು, ಮಾ.20-ಎಲ್ಲರಿಗೂ ಒಳ್ಳೆಯದನ್ನು ಮಾಡು ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ನಟಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸುಮಲತಾ ಅವರು ದೇವಾಲಯದ ಪ್ರವೇಶದ್ವಾರದಲ್ಲಿರುವ ಗಣಪತಿ ದೇವಾಲಯದಲ್ಲಿ ನಾಮಪತ್ರ ಇರಿಸಿ ಪೂಜೆ ಸಲ್ಲಿಸಿದ ನಂತರ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು,ನಾನು ಇಂದು ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ಹಾಗಾಗಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲು ಬಂದಿರುವುದಾಗಿ ಹೇಳಿದರು.

ನನ್ನ ಪತಿ ಪ್ರತಿಬಾರಿ ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆಯುತ್ತಿದ್ದರು. ಇದನ್ನೂ ನಾನು ಸಹ ಮುಂದುವರೆಸಿಕೊಂಡು ಹೋಗುತ್ತಿದ್ದೇನೆ ಎಂದ ಅವರು, ನನ್ನ ಜೊತೆ ಎಂದಿಗೂ ಅವರಿದ್ದಾರೆ. ನನಗೆ ಯಾವುದೇ ಟೆನ್ಷನ್ ಇಲ್ಲ ಎಂದು ಹೇಳಿದರು.

ಅಭಿಮಾನಿಗಳ ಜೊತೆ ನಾಮಪತ್ರ ಸಲ್ಲಿಸಲು ಮಂಡ್ಯಗೆ ಹೋಗುತ್ತಿದ್ದೇನೆ. ಒಂದು ಒಳ್ಳೆಯ ಉದ್ದೇಶದಿಂದ ಹೆಜ್ಜೆ ಇಟ್ಟಿರುವುದರಿಂದ ಒಳ್ಳೆಯದು ಮಾಡು ಎಂದು ಚಾಮುಂಡೇಶ್ವರಿಯಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.

ಪುತ್ರ ಅಭಿಷೇಕ್, ಖ್ಯಾತ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸೇರಿದಂತೆ ನೂರಾರು ಅಭಿಮಾನಿಗಳು, ಕಾರ್ಯಕರ್ತರು ಜೊತೆಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ