ಪ್ರಧಾನಿ ಮೋದಿ ಹಿಟ್ಲರ್ ಹಾದಿ ಹಿಡಿದಿದ್ದಾರೆ: ಸಿಎಂ ಕೇಜ್ರಿವಾಲ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮೋದಿಯವರು ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಫ್​ ಹಿಟ್ಲರ್​ನ ಹಾದಿಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹಿಟ್ಲರ್​ನ ಗೂಂಡಾಗಳು ಅಮಾಯಕರ ಮೇಲೆ ದಾಳಿ ಮಾಡುತ್ತಿದ್ದರು. ಕೊಲ್ಲುತ್ತಿದ್ದರು. ಅದೇ ರೀತಿ ಪ್ರಧಾನಿ ಮೋದಿ ಇಂದು ಅವರ ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದರೆ ಅವರನ್ನೇ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿಟ್ಲರ್​ನ ಆಡಳಿತದಲ್ಲಿ ಸಂತ್ರಸ್ತರ ವಿರುದ್ಧವೇ ಪೊಲೀಸರು ಕೇಸು ದಾಖಲಿಸುತ್ತಿದ್ದರು. ಮೋದಿ ಕೂಡ ಹಾಗೇ ನಡೆದುಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಮೋದಿ ಹಿಟ್ಲರ್​ನ ಹಾದಿ ಹಿಡಿದಿದ್ದಾರೆ. ಆದರೆ, ಈ ದೇಶ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದರ ಬಗ್ಗೆ ಮೋದಿ ಭಕ್ತರು ಮಾತ್ರ ಜಾಣ ಕುರುಡರಾಗಿದ್ದಾರೆ ಎಂದು ಕೇಜ್ರಿವಾಲ್ ಆಕ್ರೊಶ ವ್ಯಕ್ತಪಡಿಸಿದ್ದಾರೆ.

Arvind kejriwal,PM Narendra Modi,hitlers path

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ