ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿಸಲು ಬಿಜೆಪಿಯನ್ನು ಮಟ್ಟಹಾಕಬೇಕು-ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್

ಕಡೂರು, ಮಾ.25-ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸಮ್ಮುಖದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಅವರು, ದೇಶದ ಬದಲಾವಣೆಯ ಪರ್ವ ಆರಂಭಕ್ಕೆ ಮೈತ್ರಿ ಪಕ್ಷಗಳ ಹೊಂದಾಣಿಕೆಯ ಮೂಲಕ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿಸಲು ಕೋಮುವಾದಿಯ ಬಿಜೆಪಿಯನ್ನು ಮಟ್ಟಹಾಕಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿದ್ದರಾಗಬೇಕಿದೆ ಎಂದರು.

ಸಭೆಯ ನಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, ಸಮೀಪದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಕೆಪಿಸಿಸಿ ಸದಸ್ಯ ಕೆ.ಎಸ್. ಆನಂದ್ ಅವರ ನಿವಾಸಕ್ಕೆ ಭೇಟಿ ನೀಡಿದರು.

ಬಳಿಕ ಕಡೂರು ಮತ್ತು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂಧಿಕಲ್ಲೇಶ್, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಎಂ.ಕೆಂಪರಾಜ್ ಹಾಗೂ ದಿ.ಶಾಸಕ ಕೆ.ಎಂ.ಕೃಷ್ಣಮೂರ್ತಿ ಅವರ ಪತ್ನಿ ಸುಜಾತ ಕೃಷ್ಣಮೂರ್ತಿ ಮನೆಗೆ ಭೇಟಿ ನೀಡಿ ಬೆಂಬಲ ನೀಡುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಸಾವಿತ್ರಿಗಂಗಣ್ಣ, ಗುತ್ತಿಗೆದಾರರಾದ ಕೆ.ಎಸ್. ರಮೇಶ್, ಕೆ.ಇ. ಹಿರಿಯಣ್ಣ, ಬಿ.ಬಿ. ಜಗಧೀಶ್ ಮತ್ತು ಪಟ್ಟಣದ ಎಂಎಸ್‍ಆರ್ ವೃತ್ತದಲ್ಲಿ ಮುಸ್ಲಿಂ ಮುಖಂಡರು ಹಾಗೂ ಬೀರೂರಿನ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ