ಮಾ.29 ಮತ್ತು 30ರಂದು ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಬೆಂಗಳೂರು, ಮಾ.26-ಮಾಗಡಿ ರಸ್ತೆ ಸಂಚಾರ ಪೊಲೀಸರು ಹಾಗೂ ಸೋಲದೇವನಹಳ್ಳಿ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ದ್ವಿಚಕ್ರ ವಾಹನಗಳನ್ನು ಮಾ.29 ಮತ್ತು 30ರಂದು ಬಹಿರಂಗ ಹರಾಜು ಹಾಕಲಾಗುತ್ತದೆ.

ಮಾಗಡಿ ರಸ್ತೆ ಸಂಚಾರ: ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆ ಆವರಣದಲ್ಲಿ ಮಾ.29ರಂದು ಬೆಳಗ್ಗೆ 11.30ಕ್ಕೆ 31 ವಾಹನಗಳನ್ನು ಹರಾಜು ಹಾಕಲಾಗುತ್ತದೆ.

ಈ ವಾಹನಗಳ ಮಾಲೀಕರು ಪತ್ತೆಯಾಗದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಈ ವಾಹನಗಳನ್ನು ಅಂದು ಬಹಿರಂಗ ಹರಾಜು ಮಾಡಲಾಗುತ್ತದೆ.

ವಾಹನಗಳು ಯಾವ ಸ್ಥಿತಿಯಲ್ಲಿರುತ್ತವೋ ಅದೇ ಸ್ಥಿತಿಯಲ್ಲಿ ಹರಾಜು ಹಾಕಲಾಗುತ್ತದೆ.

ಸೋಲದೇವನಹಳ್ಳಿ: ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ 22 ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಮಾ.30ರಂದು ಈ ವಾಹನಗಳನ್ನು ಹರಾಜು ಹಾಕಲಾಗುತ್ತದೆ.

ಈ ವಾಹನಗಳನ್ನು ಸಾರ್ವಜನಿಕ ಬಹಿರಂಗ ಹರಾಜು ಮಾಡಲು ನ್ಯಾಯಾಲಯದಿಂದ ಅನುಮತಿ ಪಡೆದಿದ್ದು, ಅಂದು ಸೋಲದೇವನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಹರಾಜು ಹಾಕಲಾಗುತ್ತದೆ.

ಹರಾಜಿನಿಂದ ಬಂದ ಹಣವನ್ನು ಸರ್ಕಾರಿ ಖಜಾನೆಗೆ ಪಾವತಿಸಿ ವರದಿ ಸಲ್ಲಿಸಲಾಗುತ್ತದೆ. ವಾಹನ ಹರಾಜಿನಂದು ಯಶವಂತಪುರ ಉಪವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಖುದ್ದು ಹಾಜರಿರುತ್ತಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ