ಟಿಕೆಟ್ ತಪ್ಪಿದ್ದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಕೊಟ್ಟ ಉತ್ತರವೇನು?

ಬೆಂಗಳೂರು: ನಮ್ಮ ಪಕ್ಷದ ಸಿದ್ಧಾಂತದ ಮೇಲೆ ನಾವು ನಿಂತಿದ್ದೇವೆ. ದೇಶ ಮೊದಲು, ಪಕ್ಷ ನಂತರ ಹಾಗೂ ನಮ್ಮ ಸ್ವಂತ ಹಿತಾಶಕ್ತಿಗಳು ಕೊನೆಯಲ್ಲಿ ಎಂದು ನಾನು ಮೊದಲಿನಿಂದಲೂ ನಮ್ಮ ಕಾರ್ಯಕರ್ತರ ಬಳಿ ಹೇಳಿಕೊಂಡು ಬಂದಿದ್ದೇನೆ. ನಾವು ಮದುವೆಯಾದಗಿನಿಂದ ಪಕ್ಷ ಕಟ್ಟುವ ಕೆಲಸದಲ್ಲಿ ನಿರತಗಳಾಗಿದ್ದೇನೆ ಎಂದು ತೇಜಸ್ವಿನಿ ಅನಂತ್ ಕುಮಾರ್ ತಿಳಿಸಿದರು.

ಲೋಕಸಭಾ ಚುನಾವಣೆಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿದ್ದರ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಒಂದೊಂದು ಸಲ ನಮಗೆ ಅಸಮಾಧಾನ ಆಗಿರುತ್ತದೆ.

ಆದರೆ ಈಗ ನಮ್ಮ ಪ್ರಭುದ್ಧತೆಯನ್ನು ತೋರಿಸುವ ಸಮಯ ಬಂದಿದೆ. ನಾವು ಅಂದುಕೊಂಡಿದ್ದು ಆಗಿಲ್ಲ ಎಂದಾಗ ಸಹಜವಾಗಿ ಎಲ್ಲರಲ್ಲೂ ಯಾಕೆ ಆಗಿಲ್ಲ ಎಂಬ ಪ್ರಶ್ನೆ ಬರುತ್ತದೆ. ಆದರೆ ಅದಕ್ಕಿಂತ ಪಕ್ಷದ ಮುಖಂಡರ ತೀರ್ಮಾನವೇ ದೊಡ್ಡದಾಗಿದೆ. ಹೀಗಾಗಿ ಮೊದಲು ದೇಶ ಸಿದ್ಧಾಂತಕ್ಕೆ ಬದ್ಧರಾಗಿರುತ್ತೇವೆ. ನಮ್ಮ ಕಾರ್ಯಕರ್ತರು ಕೂಡ ಈ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ ಎಂದರು.

ಮತ್ತೊಮ್ಮೆ ಪ್ರಧಾನಿ ಮೋದಿ ಅವರು ಆಯ್ಕೆಯಾಗಬೇಕು. ಹೀಗಾಗಿ ಬೇರೆ ಬೇರೆ ಯೋಚನೆಗಳನ್ನು ಬಿಟ್ಟು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡೋಣ. ಯಾರ ವಿರುದ್ಧವೂ ಘೋಷಣೆ ಕೂಗುವುದು ಬೇಡ. ಅಳುವುದಾಗಲಿ, ಬೇಸರವಾಗಲಿ ಅದನ್ನು ಸಾರ್ವಜನಿಕವಾಗಿ ತೋರಿಸುವುದು ನಮ್ಮ ಪಕ್ಷದ ಪದ್ಧತಿಯಲ್ಲ. ನಮ್ಮ ಪಕ್ಷದ ನಾಯಕರು, ಮುಖಂಡರು ಇದೇ ಸಿದ್ಧಾಂತವನ್ನು ಅನುಸರಿಸಿಕೊಂಡು ಬಂದಿದ್ದಾರೆ ಎಂದರು.

ಒಂದೊಂದು ಸಲ ನಮಗೆ ಅಸಮಾಧಾನ ಆಗಿರುತ್ತದೆ. ಆದರೆ ಈಗ ನಮ್ಮ ಪ್ರಭುದ್ಧತೆಯನ್ನು ತೋರಿಸುವ ಸಮಯ ಬಂದಿದೆ. ನಾವು ಅಂದುಕೊಂಡಿದ್ದು ಆಗಿಲ್ಲ ಎಂದಾಗ ಸಹಜವಾಗಿ ಎಲ್ಲರಲ್ಲೂ ಯಾಕೆ ಆಗಿಲ್ಲ ಎಂಬ ಪ್ರಶ್ನೆ ಬರುತ್ತದೆ. ಆದರೆ ಅದಕ್ಕಿಂತ ಪಕ್ಷದ ಮುಖಂಡರ ತೀರ್ಮಾನವೇ ದೊಡ್ಡದಾಗಿದೆ. ಹೀಗಾಗಿ ಮೊದಲು ದೇಶ ಸಿದ್ಧಾಂತಕ್ಕೆ ಬದ್ಧರಾಗಿರುತ್ತೇವೆ. ನಮ್ಮ ಕಾರ್ಯಕರ್ತರು ಕೂಡ ಈ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ ಎಂದು ತೇಜಸ್ವಿನಿ ಅವರು ಹೇಳಿದರು.

ಮತ್ತೊಮ್ಮೆ ಪ್ರಧಾನಿ ಮೋದಿ ಅವರು ಆಯ್ಕೆಯಾಗಬೇಕು. ಹೀಗಾಗಿ ಬೇರೆ ಬೇರೆ ಯೋಚನೆಗಳನ್ನು ಬಿಟ್ಟು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡೋಣ. ಯಾರ ವಿರುದ್ಧವೂ ಘೋಷಣೆ ಕೂಗುವುದು ಬೇಡ. ಅಳುವುದಾಗಲಿ, ಬೇಸರವಾಗಲಿ ಅದನ್ನು ಸಾರ್ವಜನಿಕವಾಗಿ ತೋರಿಸುವುದು ನಮ್ಮ ಪಕ್ಷದ ಪದ್ಧತಿಯಲ್ಲ. ನಮ್ಮ ಪಕ್ಷದ ನಾಯಕರು, ಮುಖಂಡರು ಇದೇ ಸಿದ್ಧಾಂತವನ್ನು ಅನುಸರಿಸಿಕೊಂಡು ಬಂದಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ