ಮಲೆಮಹದೇಶ್ವರ ಬೆಟ್ಟದಲ್ಲಿ ಕಾಡ್ಗಿಚ್ಚು

ಚಾಮರಾಜನಗರ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾದ ಘಟನೆ ಬೆನ್ನಲ್ಲೇ ಈಗ ಚಾಮರಾಜನಗರ ಜಿಲ್ಲೆ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಕಾಳ್ಗಿಚ್ಚು ಸಂಭವಿಸಿದೆ.

ಮಲೆಮಹದೇಶ್ವರ ಬೆಟ್ಟದ ಕಾವೇರಿ ವನ್ಯ ಜೀವಿ ಧಾಮ, ಹನೂರು ತಾಲೂಕಿನ ಪೊನ್ನಾಚಿಯ ಬೆಟ್ಟದ ವ್ಯಾಪ್ತಿಯಲ್ಲಿ ಬೆಂಕಿ ವ್ಯಾಪಿಸಿದ್ದು ನೂರಾರೂ ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಪಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ. ಇಂದು ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ