ನಾಳೆ ಕೋಲಾರಕ್ಕೆ ಆಗಮಿಸಲಿರುವ ಅಮಿತ್ ಶಾ

ಕೋಲಾರ, ಏ.9- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾಳೆ ನಗರಕ್ಕೆ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾರ್ಯಕ್ರಮದ ಸಹ ನಿರ್ದೇಶಕ ಮಾಗೇರಿ ನಾರಾಯಣಸ್ವಾಮಿ ಈ ವಿಷಯ ತಿಳಿಸಿದ್ದು, ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ಪರ ಪ್ರಚಾರ ಮಾಡಿ ಮತಯಾಚಿಸಲಿದ್ದಾರೆ ಎಂದರು.

ನಾಳೆ ಸಂಜೆ 4.15ಕ್ಕೆ ಮೆಡಿಕಲ್ ಕಾಲೇಜಿನ ಹೆಲಿಪ್ಯಾಡ್‍ಗೆ ಅಮಿತ್ ಶಾ ಆಗಮಿಸಲಿದ್ದು, ಅಲ್ಲಿಂದ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸುಮಾರು 8ರಿಂದ 10 ಸಾವಿರ ಮಂದಿ ಸೇರುವ ನಿರೀಕ್ಷೆಯಿದ್ದು, ಶಾಸಕರಾದ ಸಿ.ಟಿ.ರವಿ, ಅರವಿಂದ್ ಲಿಂಬಾವಳಿ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ