ರಿಜ್ವಾನ್ ಅರ್ಷದ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ; 100ಕ್ಕೂ ಹೆಚ್ಚು ಅಧಿಕಾರಿಗಳಿಂದ ಮುಂದುವರಿದ ಶೋಧ

ಬೆಂಗಳೂರುವಿರೋಧ ಪಕ್ಷಗಳ ನಾಯಕರು ಹಾಗೂ ಅವರ ಆಪ್ತರ ಮನೆ ಮೇಲೆ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ. ಈ ದಾಳಿಗಳೆಲ್ಲಾ ರಾಜಕೀಯಪ್ರೇರಿತ ದಾಳಿ ಎಂದು ವಿರೋಧ ಪಕ್ಷಗಳ ನಾಯಕರು ಆರೋಪ ಮಾಡುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರು ಸೆಂಟ್ರಲ್​ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್​ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ.  

ಉದ್ಯಮಿಗಳಾದ ಅಮಾನುಲ್ಲಾ ಖಾನ್​​​, ಕಮಲ್​ ಪಾಷಾ, ನಯೀಜ್​ ಖಾನ್​ ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆಸಲಾಗಿದೆ. 20ಕ್ಕೂ ಹೆಚ್ಚು ಕಡೆ 100ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು ಪ್ಯಾಲೇಸ್​ ಡೆಕೋರೇಷನ್​ ಮಾಡುವ ಅಮಾನುಲ್ಲಾ ಖಾನ್, ಗೋಲ್ಡನ್​​​ ಆರ್ಚರಿ ಮಾಲೀಕ ಕಮಲ್​​ ಪಾಷಾ ಹಾಗೂ ರಿಯಲ್​​ ಎಸ್ಟೇಟ್ ವ್ಯವಹಾರ ನಡೆಸುವ ನಯೀಜ್​​ ಖಾನ್​​ ಮನೆ ಮೇಲೆ ಐಟಿ ದಾಳಿ ನಡೆದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ