ದೇಶಾದ್ಯಂತ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿ ಎಂಬ ಘೋಷಣೆ ಕೇಳುತ್ತಿದೆ: ಪ್ರಧಾನಿ ಮೊದಿ

ವಾರಾಣಸಿ: ಎರಡನೇ ಬಾರಿಗೆ ಲೋಕಸಭೆ ವಾರಾಣಸಿಯಿಂದ ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೃಹತ್ ರೋಡ್ ಶೋ ಮೂಲಕ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಮಾತನಾಡಿದ ಪ್ರಧಾನಿ, ದೇಶಾದ್ಯಂತ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿ ಎಂಬ ಘೋಷಣೆ ಕೇಳಿಬರುತ್ತಿದೆ.

ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ, ಕಾಶಿ ಘಾಟ್‌ನಿಂದ ಪೋರ್‌ಬಂದರ್‌ ವರೆಗೂ ದೇಶಾದ್ಯಂತ ಎಲ್ಲೆಡೆ ಜನರ ಬಾಯಲ್ಲಿ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಘೋಷಣೆ ಕೇಳಿ ಬರುತ್ತಿದೆ ಎಂದರು.

ನಿಮ್ಮ ಅದ್ಭುತ ಸ್ವಾಗತಕ್ಕೆ ನಾನು ಕೃತಜ್ಞನಾಗಿದ್ದೇನೆ. ಈ ಬಾರಿ ಚುನಾವಣೆಯಲ್ಲಿ ಎರಡು ಅಂಶಗಳು ಪ್ರಮುಖವಾಗಿವೆ. ಮೊದಲು ವಾರಣಾಸಿಯಲ್ಲಿ ಗೆಲುವು ಸಾಧಿಸಬೇಕು. ನನಗೆ ಅನಿಸುತ್ತೆ ನಾವು ಈಗಾಗಲೇ ಕಾಶಿಯನ್ನು ಗೆದ್ದಿದ್ದೇವೆ. ಇದಕ್ಕೆ ರೋಡ್ ಶೋನಲ್ಲಿ ಇದ್ದ ಜನರೇ ಸಾಕ್ಷಿ. ಇನ್ನೊಂದು, ಪ್ರಜಾಪ್ರಭುತ್ವದ ಗೆಲುವು ಆಗಬೇಕು. ಇಡೀ ಭಾರತ, ದೇಶಕ್ಕೆ ಮತ್ತೊಮ್ಮೆ ಮೋದಿ ಸರ್ಕಾರ ಬೇಕು ಎಂದು ಹೇಳುತ್ತಿದೆ. ಸರ್ಕಾರ ಆಯ್ಕೆ ಮಾಡಿಕೊಳ್ಳುವುದು ಈ ದೇಶದ ಪ್ರಜೆಯ ಕೈಯಲ್ಲಿದೆ ಎಂದರು.

ಈ ಬಾರಿ ಗೆಲುವು ಎಲ್ಲ ಹಳೆಯ ದಾಖಲೆಗಳನ್ನು ಮುರಿದು ಇತಿಹಾಸ ಸೃಷ್ಟಿಸುವಂತಿರಬೇಕು. ಉತ್ತಮ ಆಡಳಿತಕ್ಕಾಗಿ ನಾವು ಪ್ರಾಮಾಣಿಕ ಕೆಲಸ ಮಾಡಿದ್ದೇವೆ.

ಜನರ ಹೃದಯವನ್ನು ಗೆದ್ದುಬಿಟ್ಟರೆ ಪಕ್ಷದ ಗೆಲುವು ತಾನಾಗಿಯೇ ಬರುತ್ತದೆ. ಒಂದು ಬೂತ್‌ನಲ್ಲಿ ಸೋತರೂ ವಾರಾಣಸಿಯ ಗೆಲುವನ್ನು ಖುಷಿಪಡಲು ಸಾಧ್ಯವಾಗದು ಎಂದು ಮೋದಿ ಕಾರ್ಯಕರ್ತರಿಗೆ ತಿಳಿಸಿದದರೆ.

ನಾನು ಕಾರ್ಯಕರ್ತರನ್ನು ಭೇಟಿ ಮಾಡಲು ಎಂದಿಗೂ ನಿರಾಕರಿಸಿಲ್ಲ. ಅವರು ನನ್ನನ್ನು ಭೇಟಿ ಮಾಡಬೇಕು ಎಂದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡಿದ್ದೇನೆ.

ನಾವು ಭಾರತದ ಚಿಕ್ಕ ಯೋಧರು. ದೇಶಕ್ಕಾಗಿ ಕೆಲಸ ಮಾಡಲು ನಾನು ಬಂದಿದ್ದೇನೆ. ಈ ಚುನಾವಣೆ ಮೋದಿ ಬಗ್ಗೆ ಅಲ್ಲ. ಈ ಚುನಾವಣೆ ಕಾರ್ಯಕರ್ತರದ್ದು.

ಪ್ರತಿಯೊಂದು ಮತ ಇಲ್ಲಿ ಮುಖ್ಯವಾಗುತ್ತದೆ. ಮೋದಿ ಗೆಲ್ಲುತ್ತಾರೋ ಸೋಲುತ್ತಾರೋ ಎಂಬುದನ್ನು ಮರೆತುಬಿಡಿ. ಏಕೆಂದರೆ ಏನೇ ಆದರೂ ಗಂಗಾಮಾತೆ ಅದನ್ನು ನೋಡುತ್ತಿರುತ್ತಾಳೆ ಎಂದಿದ್ದಾರೆ.

PM Modi,Varanasi,Nomination file

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ