ಮಾಜಿ ಪಿ.ಎಂ.ದೇವೇಗೌಡರ ಕುಟುಂಬ ಸದಸ್ಯರಿಂದ ವಿಶೇಷ ಪೂಜೆ

ಶೃಂಗೇರಿ,ಮೇ4-ಕೊಪ್ಪ ತಾಲ್ಲೂಕಿನ ಕಮರಡಿ ಬಳಿಯ ಕುಡನೆಲ್ಲಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ನಿನ್ನೆಯಿಂದ ಉಮಾಮಹೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯದಲ್ಲಿ ತೊಡಗಿದ್ದರು.

ನಿನ್ನೆ ಸಂಜೆ ದೇವಾಲಯಕ್ಕೆ ಆಗಮಿಸಿದ ಹೆಚ್.ಡಿ. ದೇವೇಗೌಡ, ಪತ್ನಿ ಚೆನ್ನಮ್ಮ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಂಕಲ್ಪ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿದ್ದು, ಇಂದು ಹೋಮದ ಪೂರ್ಣಾಹುತಿ ನೆರವೇರಿಸಿದರು ಎಂದು ಉನ್ನತ ಮೂಲಗಳು ತಿಳಿಸಿವೆ.

ಕಳೆದ ಐದು ದಿನಗಳ ಕಾಲ ಉಡುಪಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಪ್ರಕೃತಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಉಡುಪಿಯಿಂದ ನೇರವಾಗಿ ಕೊಪ್ಪದಲ್ಲಿರುವ ಉಮಾಮಹೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಕಾರ್ಯಗಳಲ್ಲಿ ಪಾಲ್ಗೊಂಡರು.

ಖಾಸಗಿ ಪೂಜಾ ಕಾರ್ಯಕ್ರಮವಾಗಿದ್ದರಿಂದ ಮಾಧ್ಯಮದವರಿಗೆ ಅವಕಾಶವಿರಲಿಲ್ಲ. ಅಲ್ಲದೆ ವಿಶೇಷ ಬಂದೋಬಸ್ತ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿತ್ತು.

ಮುಖ್ಯಮಂತ್ರಿ ಸಂಜೆ ಬೆಂಗಳೂರಿಗೆ:
ಉಡುಪಿ ಬಳಿ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಹಾಗೂ ಕುಡನೆಲ್ಲಿ ಉಮಾಮಹೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ