ಲಾಹೋರ್‍ನಲ್ಲಿ ಬಾಂಬ್ ಸ್ಪೋಟಕ್ಕೆ ಆರು ಮಂದಿ ಬಲಿ

ಲಾಹೋರ್, ಮೇ 8-ಪಾಕಿಸ್ತಾನದ ಲಾಹೋರ್‍ನಲ್ಲಿ ಸಂಭವಿಸಿದ ಭೀಕರ ಬಾಂಬ್‍ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು 19ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಹೋರ್‍ನ ದಾತಾ ದರ್ಬಾರ್ ಬಳಿ ಈ ಸ್ಫೋಟ ಸಂಭವಿಸಿತು. ಈ ಘಟನೆಯಲ್ಲಿ 6 ಜನ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸ್ಫೋಟದ ಹಿಂದೆ ಬಲೂಚಿಸ್ಥಾನದ ಉಗ್ರರ ಕೈವಾಡವಿರುವ ಶಂಕೆ ಇದೆ.

ಭಯೋತ್ಪಾದನೆ ಮತ್ತು ಉಗ್ರಗಾಮಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ತಾನು ಪೋಷಿಸಿದ ಭಯೋತ್ಪಾದಕರಿಂದಲೇ ಆಗಾಗ ಆತಂಕಗಳು ಎದುರಾಗುತ್ತಿರುವುದು ವಾಸ್ತವ ಸ್ಥಿತಿ ವ್ಯಂಗ್ಯವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ