ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ಧ ಮನೆ ಮಾಲೀಕನಿಂದ ದೂರು ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ಆದಿತ್ಯ ವಿರುದ್ಧ ಮನೆ ಮಾಲೀಕರು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆದಿತ್ಯ, ಸದಾಶಿವನಗರದ ಆರ್‍ಎಂವಿ ಎಕ್ಷಟೆನ್ಷನ್‍ನಲ್ಲಿರುವ ಪ್ರಸನ್ನ ಅವರ ಬಾಡಿಗೆ ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಆದರೆ ಕಳೆದ ಏಳು ತಿಂಗಳಿಂದ ಬಾಡಿಗೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿದಕ್ಕೆ ಮನೆ ಮಾಲೀಕರಾದ ಪ್ರಸನ್ನ ಜೊತೆ ಜಗಳವಾಡಿದ್ದಾರೆ.

ಆದಿತ್ಯ ಅವರ ಜೊತೆ ಅವರ ತಂದೆ ರಾಜೇಂದ್ರ ಸಿಂಗ್ ಬಾಬು, ತಂಗಿ ಹಾಗೂ ತಾಯಿ ಮನೆಯಲ್ಲಿ ವಾಸಿಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ತಿಂಗಳಿಗೆ 40 ಸಾವಿರ ರೂ. ನಂತೆ ಬಾಡಿಗೆಗೆ ನೀಡಲಾಗಿತ್ತು. ಬಳಿಕ ಈಗ ಮನೆ ಮಾಲೀಕರು 48 ಸಾವಿರ ಬಾಡಿಗೆಗೆ ಏರಿಸಿದ್ದಾರೆ. ಆದಿತ್ಯ ಇದುವರೆಗೆ 2 ಲಕ್ಷ 88 ಸಾವಿರ ಹಣ ಬಾಕಿ ನೀಡಬೇಕಿದೆ. ಈ ಹಿನ್ನಲೆಯಲ್ಲಿ ಮನೆ ಖಾಲಿ ಮಾಡಿಸಿ ಮಾಲೀಕ ಪ್ರಸನ್ನ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಈ ನಡುವೆ ನಟ ಆದಿತ್ಯ ಹಾಗೂ ಅವರ ತಂದೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮನೆ ಮಾಲಿಕನ ವಿರುದ್ಧ ಕೋರ್ಟ್ ಮೆಟ್ತಿಲೇರಿದ್ದಾರೆ. ನಿಗದಿ ಮಾಡಿದ್ದಕ್ಕಿಂತ ಹೆಚ್ಚಿನ ಬಾಡಿಗೆ ಕೇಳುತ್ತಿದ್ದಾರೆ. ಹಾಗಾಗಿ ಬಾಡಿಗೆಯನ್ನೂ ಕೊಟ್ಟಿಲ್ಲ. ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದೇವೆ. ಮೇ 28ರಂದು ವಿಚಾರಣೆ ನಡೆಯಲಿದೆ ಎಂದು ರಾಜೇಂದ್ರ ಸಿಂಗ್​ ಬಾಬು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಆದಿತ್ಯ, ನಾನು ಈಗ ಏನನ್ನೂ ಹೇಳುವುದಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ಎಲ್ಲದಕ್ಕೂ ಅಲ್ಲಿಯೇ ಉತ್ತರಿಸುತ್ತೇನೆ ಎಂದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ