ಮಂಡ್ಯ ಲೋಕಸಭಾ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಭರ್ಜರಿ ಜಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೆತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 90 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆ ಇತಿಹಾಸದಲ್ಲೆ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೊತೆಗೆ ಆರಂಭದಿಂದಲೂ ತೀವ್ರ ಪೈಪೋಟಿ ನೀಡಿದ ಸುಮಲತಾ ಅಂಬರೀಷ್ ಕೊನೆಗೆ ಗೆಲುವಿನ ವಿಜಯಮಾಲೆ ಹಾಕಿಕೊಂಡಿದ್ದಾರೆ.

ಒಟ್ಟಿನಲ್ಲಿ ಮಗನನ್ನು ಗೆಲ್ಲಿಸಬೇಕು ಎಂದು ಪಣತೊಟ್ಟಿದ್ದ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತೀವ್ರ ಮುಖಭಂಗವುಂಟಾಗಿದೆ. ಸ್ವಾತಂತ್ರ್ಯ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿ ಸ್ವತಂತ್ರ್ಯವಾಗಿ ಸ್ಪರ್ಧಿಸಿ ಗೆದ್ದ ಇತಿಹಾಸ ಇಲ್ಲ. ಇದೇ ಮೊದಲಬಾರಿಗೆ ಸುಮಲತಾ ಗೆಲುವುಸಾಧಿಸುವ ಮೂಲಕ ಮೊದಲ ಪಕ್ಷೇತರ ಅಭ್ಯರ್ಥಿ ಎಂದು ಹೇಳಲಾಗಿದೆ.

lok sabha election-2019,mandya,sumalata ambareesh,win

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ