ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು; ಅಧಿಕೃತ ಘೋಷಣೆ ಮಾತ್ರ ಬಾಕಿ

ನವದೆಹಲಿ:ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಕೊನೇ ಘಟ್ಟ ತಲುಪಿದ್ದು, ಈಗಾಗಲೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಾಂಧೀನಗರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹಾಗೂ ಗಾಂಧೀನಗರದಲ್ಲಿ ಅಮಿತ್ ಶಾ ಭಾರೀ ಅಂತರಗಳಿಂದ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ವಾರಾಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 1.20 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಭೀಷ್ಮ ಎಲ್ ಕೆ ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗುಜರಾತ್ ನ ಗಾಂಧೀನಗರ ಕ್ಷೆತ್ರದಿಂದ ಈಬಾರಿ ಕಣಕ್ಕಿಳಿದಿರುವ ಅಮಿತ್ ಶಾ 25 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ಈಗಾಗಲೇ ಎನ್ ಡಿ ಎ 343 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಯುಪಿಎ 90 ಹಾಗೂ ಇತರರು 109 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಇನ್ನು ಬಿಜೆಪಿ ಈಗಾಗಲೇ ಏಕಾಂಗಿಯಾಗಿ ಮ್ಯಾಜಿಕ್ ಸಂಖ್ಯೆಯನ್ನೂ ಮೀರಿ ಮುಂದೆ ಸಾಗಿದೆ. ಮ್ಯಾಜಿಕ್ ಸಂಖ್ಯೆ 272. ಬಿಜೆಪಿ 287 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Lok sabha election-2019,PM modi,amith shah,win

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ