ಕರ್ನಾಟಕಕ್ಕೆ ಕಾವೇರಿ ಬರೆ: ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಪ್ರಾಧಿಕಾರ ಆದೇಶ

ನವದೆಹಲಿ: ಬರಗಾಲದ ಸನ್ನಿವೇಶದಲ್ಲಿ ತತ್ತರಿಸುತ್ತಿರುವ ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತೊಂದು ಶಾಕ್ ನೀಡಿದೆ. ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿದೆ.

ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಯಲ್ಲಿ ಜೂನ್ ತಿಂಗಳಲ್ಲಿ ಬಿಡಬೇಕಾಗಿರುವ 9.19 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಸಿಡಬ್ಲ್ಯೂಸಿ ಸೂಚಿಸಿದೆ.

ಆದರೆ ಕಾವೇರಿಕೊಳ್ಳಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದು, ರಾಜ್ಯದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಸಧ್ಯ ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ನಾಲ್ಕು ಜಲಾಶಯಗಳಲ್ಲಿ ಕೇವಲ 14 ಟಿಎಂಸಿ ಮಾತ್ರ ನೀರಿದೆ. ಇದನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸಲಾಗಿದೆ ಎಂದು ಕರ್ನಾಟಕ ವಾದ ಮಂಡಿಸಿದ ಹಿನ್ನಲೆಯಲ್ಲಿ ಪ್ರಾಧಿಕಾರ ಷರತ್ತಿನ ಮೇರೆಗೆ ನೀರು ಹರಿಸಲು ಸೂಚಿಸಿದೆ.

ರಾಜ್ಯದಲ್ಲಿ ಮಳೆಯಾಗಿ ನೀರಿನ ಒಳ ಹರಿವು ಪ್ರಮಾಣ ಹೆಚ್ಚಾದರೆ ಮಾತ್ರ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ತಿಳಿಸಿದೆ. ಒಂದು ವೇಳೆ ಒಳಹರಿಯು ಇಲ್ಲದಿದ್ದಲ್ಲಿ ನೀರು ಬಿಡುವ ಅಗತ್ಯವಿಲ್ಲ ಎಂದು ಹೇಳಿದೆ.

ನೀರು ಬಿಡುವ ಕುರಿತು ಷರತ್ತಿನ ಮೇರೆಗೆ ಕರ್ನಾಟಕ ಒಪ್ಪಿಗೆ ಸೂಚಿಸಿದೆ. ಜೂನ್ ತಿಂಗಳ ಅಂತ್ಯದ ಒಳಗಡೆ 10 ದಿನಕ್ಕೊಮ್ಮೆ 3 ಟಿಎಂಸಿಯಂತೆ ನೀರು ಹರಿಸಬೇಕು. ಮಾನ್ಸೂನ್ ಮಳೆ ತಡವಾದರೆ ಮುಂದೆ ಬಿಡಬೇಕಾದ ನೀರಿನ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಪ್ರಾಧಿಕಾರ ಅಧ್ಯಕ್ಷ ಮಸೂದ್‌ ಹುಸೇನ್‌ ತಿಳಿಸಿದ್ದಾರೆ.
ತಿಳಿಸಿದರು.

ಪುದುಚೇರಿ ಹಾಗೂ ತಮಿಳುನಾಡಿನ ಕೋಟಾ ಮೊದಲಿನಂತೆ ಉಳಿಯಲಿದೆ. ಕರ್ನಾಟಕ 9.19 ಟಿಎಂಸಿ ನೀರನ್ನು ಜೂನ್ ಅಂತ್ಯದೊಳಗೆ ಹರಿಸಲಿದೆ. ಕರ್ನಾಟಕದಲ್ಲಿ ಮುಂಗಾರು ಎಂದಿನಂತೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರ್ನಾಟಕ ಕೂಡ ಈ ವಿಷಯವನ್ನು ತಗಾದೆಯಿಲ್ಲದೇ ಒಪ್ಪಿಕೊಂಡಿದೆ ಎಂದು ಮಸೂದ್ ತಿಳಿಸಿದರು.

cauvery water management authority orders karnataka to release 9.19 tmc water to tamilnadu

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ