ಆಸ್ಪತ್ರೆಗೆ ದಾಖಲಾದ ಸಾಧ್ವಿ ಪ್ರಗ್ಯಾ ಸಿಂಗ್

ಭೋಪಾಲ್: ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏಕಾಎಕಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಗ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಬೆಳಗಿನ ಜಾವ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮಾಲೇಗಾವ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಗ್ಯಾ ಸಿಂಗ್ ಅವರಿಗೆ ಈ ವಾರ ವಿಚಾರಣೆಗೆ ಹಾಜರಾಗುವಂತೆ ಮುಂಬೈ ವಿಶೇಷ ಕೋರ್ಟ್ ಸೂಚಿಸಿದೆ. ಇದರ ಬೆನ್ನಲ್ಲೇ ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಗ್ಯಾ ಸಿಂಗ್, ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಪ್ರಗ್ಯಾ ಸಿಂಗ್ ತೆರಳಿದ್ದು, ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಅವರ ಆಪ್ತೆ ತಿಳಿಸಿದ್ದಾರೆ.

ಕಳೆದ ಸೋಮವಾರ ಎನ್ಐಎ ವಿಶೇಷ ಕೋರ್ಟ್ ನ್ಯಾಯಾಧೀಶ ವಿಎಸ್ ಪಡಲ್ಕರ್ ಅವರು ವಿಚಾರಣೆಗೆ ವಿನಾಯ್ತಿ ಕೋರಿ ಪ್ರಗ್ಯಾ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು. ಅಲ್ಲದೆ ಈ ಹಂತದಲ್ಲಿ ವಿಚಾರಣೆಗೆ ಪ್ರಗ್ಯಾ ಖುದ್ದು ಹಾಜರಾತಿಯ ಅಗತ್ಯ ಇದೆ ಎಂದು ಹೇಳಿದ್ದರು.

Bhopal MP,Pragya singh,Hospitalised

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ