ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಹೊರಡಿಸಿ: ಕೇಂದ್ರಕ್ಕೆ ಉದ್ಧವ್ ಠಾಕ್ರೆ ಒತ್ತಾಯ

ಅಯೋಧ್ಯಾ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ರಾಮಜನ್ಮಭೂಮಿ ಅಯೋಧ್ಯಾಗೆ ಭೇಟಿ ನೀಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಯೋಧ್ಯಾಗೆ ಭೇಟಿ ನೀಡಿದ ಉದ್ಧವ್ ಠಾಕ್ರೆ, ರಾಮ್‌ಲಲ್ಲಾ ದೇಗುಲದಲ್ಲಿ ನೂತನವಾಗಿ ಆಯ್ಕೆಯಾದ ಪಕ್ಷದ 18 ಸಂಸದರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಪುತ್ರ ಆದಿತ್ಯ ಮತ್ತು ಪಕ್ಷದ ಸಂಸದರು ಸಾಥ್ ನೀಡಿದರು.

ಪೂಜೆಯ ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಕೇಂದ್ರದಲ್ಲಿ ಮೋದಿ ಜೀ ನೇತೃತ್ವದ ಪ್ರಬಲ ಸರ್ಕಾರವಿದೆ. ಈ ಮೂಲಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಬೇಕಿದೆ.

ಬಿಜೆಪಿಯು ರಾಮ ಮಂದಿರ ನಿರ್ಮಾಣ ಮಾಡುತ್ತದೆ ಎಂಬ ಕಾರಣಕ್ಕೆ ದೇಶದ ಜನರು ಲೋಕಸಭಾ ಚುನಾವಣೆಯಲ್ಲಿ ಬಹುಮತ ನೀಡಿದ್ದಾರೆ ಎಂದು ತಿಳಿಸಿದರು.

After Election Win, Shiv Sena Demands Ordinance For Ram Temple In Ayodhya

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ