ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆ-ಯೋಗ ಮಾಡಿ ಗಮನ ಸೆಳೆದ ಮಾಜಿ ಪಿಎಂ ದೇವೇಗೌಡ

Deve Gowda

ಬೆಂಗಳೂರು, ಜೂ.21- ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪದ್ಮನಾಭನಗರದ ತಮ್ಮ ನಿವಾಸದಲ್ಲಿಂದು ಯೋಗಾಭ್ಯಾಸ ಮಾಡಿ ಗಮನ ಸೆಳೆದರು.

ವಿವಿಧ ಭಂಗಿಯ ಯೋಗಾಭ್ಯಾಸಗಳನ್ನು ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ಆರೋಗ್ಯ ರಕ್ಷಣೆಗಾಗಿ ಯೋಗಾಭ್ಯಾಸ ಮಾಡಲಾಗುತ್ತಿದೆ. ಹಿಂದಿನ ಕಾಲದಲ್ಲಿ ಉಪಾಧ್ಯಾಯರು ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ ಮಾಡಿಸುತ್ತಿದ್ದರು. ಸೂರ್ಯ ನಮಸ್ಕಾರ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಿದರು.

ತಾವು ಬಾಲ್ಯದಿಂದಲೂ ಯೋಗಾಭ್ಯಾಸ ಮಾಡುತ್ತಿರುವುದಾಗಿ ಹೇಳಿದ ಗೌಡರು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ.ಪ್ರಧಾನಿಯವರು ಕೂಡ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ಮಾಡಿದ್ದಾರೆ. ಯುವ ಪೀಳಿಗೆಗೆ ಯೋಗ ಆವಶ್ಯಕವಾಗಿ ಬೇಕಾಗಿದೆ.ಇದರಿಂದ ಏಕಾಗ್ರತೆ ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದ ಗೌಡರು, ಯೋಗಕ್ಕೆ ಹೆಚ್ಚಿನ ಮಹತ್ವವನ್ನು ಪ್ರಧಾನಿ ನೀಡಿರುವುದನ್ನು ಸ್ವಾಗತಿಸುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ