ಕಾಶ್ಮೀರದ ನೀಲುಂ ಕಣಿವೆಯಲ್ಲಿ ಮೇಘ ಸ್ಫೋಟ :23 ಮಂದಿ ಮೃತರು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನೀಲುಂ ಕಣಿವೆಯಲ್ಲಿ ಮೇಘ ಸ್ಫೋಟದಿಂದ ಉಂಟಾಗಿರುವ ಪ್ರವಾಹದಿಂದ ಕನಿಷ್ಟ 23 ಮಂದಿ ಮೃತಪಟ್ಟು, ಇತರ ಹಲವರು ನಾಪತ್ತೆಯಾಗಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಾಚರಣೆಗಳ ನಿರ್ದೇಶಕ ಸಯ್ಯದ್-ಅಲ್-ರೆಹಮಾನ್ ಖುರೇಶಿ, ಕಣಿವೆಯ ಲಾಸ್ವಾ ಪ್ರದೇಶದಲ್ಲಿ ಭಾರೀ ಸಂಖ್ಯೆಯ ಮನೆಗಳು ಹಾನಿಗೊಳಗಾಗಿವೆ, 12ಕ್ಕೂ ಹೆಚ್ಚು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಕಳೆದ ರಾತ್ರಿ ಬಿದ್ದ ಭಾರೀ ಮಳೆಯಿಂದಾಗಿ ಕಣಿವೆಯಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ. ಮಹಿಳೆಯರು ಮಕ್ಕಳೂ ಸೇರಿದಂತೆ ಹಲವು ಜನರು ಈಗಲೂ ನಾಪತ್ತೆಯಾಗಿದ್ದಾರೆ. ಪ್ರದೇಶದಲ್ಲಿ ಭೂಕುಸಿತಗಳು ವರದಿಯಾಗಿವೆ. 2 ಮಸೀದಿಗಳೂ ಸೇರಿದಂತೆ ಲಾಸ್ವಾದ ಪ್ರಮುಖ ಮಾರುಕಟ್ಟೆಯ ಬಳಿ ಹಲವು ಕಟ್ಟಡಗಳು ಸಂಪೂರ್ಣವಾಗಿ ನಾಶಗೊಂಡಿವೆ. ಸ್ಥಳೀಯ ಆಡಳಿತ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ