ರಾಹುಲ್ ಗಾಂಧಿಯವರಿಂದ ಅಗತ್ಯ ಪರಿಹಾರ ಸಾಮಗ್ರಿಗಳನ್ನು ನೀಡಲು ಮನವಿ

ವಯನಾಡು, ಆ.12- ಭಾರೀ ಮಳೆ, ಪ್ರವಾಹ ಮತ್ತು ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನ ಸಂತ್ರಸ್ತರಿಗೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ನೀಡುವಂತೆ ತಮ್ಮ ಕ್ಷೇತ್ರದ ಜನತೆಗೆ ಸಂಸದ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ನಿನ್ನೆಯಿಂದ ವಯನಾಡಿನಲ್ಲಿ ಸಂಚರಿಸಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಸಂತೈಸಿರುವ ರಾಹುಲ್ ಫೇಸ್‍ಬುಕ್ ಪೇಜ್‍ನಲ್ಲಿ ಅಗತ್ಯ ಪರಿಹಾರ ಸಾಮಗ್ರಿಗಳನ್ನು ನೀಡಲು ತಮ್ಮ ಕ್ಷೇತ್ರದ ಜನತೆಗೆ ಮನವಿ ಮಾಡಿದರು.

ವಿನಾಶಕಾರಿ ಪ್ರಕೃತಿ ವಿಕೋಪದಿಂದ ವಯನಾಡಿನ ಸಹಸ್ರಾರು ಮಂದಿ ನಿರಾಶ್ರಿತರಾಗಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಅವರಿಗೆ ಅಗತ್ಯವಾದ ದಿನಬಳಕೆಯ ವಸ್ತುಗಳನ್ನು ಮತ್ತು ಪರಿಹಾರ ಸಾಮಗ್ರಿಗಳನ್ನು ನೀಡುವಂತೆ ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ