ನವೆಂಬರ್ 4 ರಿಂದ 9 ರವರೆಗೆ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ

ಬೆಂಗಳೂರು ಅ15: ಭಾರತದಲ್ಲಿ ಉತ್ಪನ್ನಗಳನ್ನು ತಯಾರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಉತ್ತೇಜಿಸುತ್ತಿದ್ದಾರೆ. ಹಾಗೆಯೇ ಹಣಕಾಸು ಸಚಿವೆ ಶ್ರೀಮತಿ. ನಿರ್ಮಲಾ ಸೀತಾರಾಮನ್ ಭಾರತದಿಂದ ರಫ್ತು ಹೆಚ್ಚಿಸಲು ಹೊಸ ಕ್ರಮಗಳನ್ನು ಪ್ರಕಟಿಸುತ್ತಿದ್ದಾರೆ. ಈ ದೃಷ್ಟಿಯಲ್ಲಿ ಕರ್ನಾಟಕದ ವಿಶ್ವೇಶ್ವರಯ್ಯ ವ್ಯಾಪಾರ ಪ್ರಚಾರ ಕೇಂದ್ರವು (ವಿಟಿಪಿಸಿ) ತನ್ನ 101 ನೇ 6 ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು (ಇಎಮ್‌ಟಿಪಿ) 2019ರ ನವೆಂಬರ್ 4 ರಿಂದ 9 ರವರೆಗೆ ಬೆಂಗಳೂರಿನ ವಿಟಿಪಿಸಿ ತರಬೇತಿ ಸಭಾಂಗಣದಲ್ಲಿ ಆಯೋಜಿಸಿದ್ದಾರೆ.

ಈ 6 ದಿನಗಳಲ್ಲಿ, 20ಕ್ಕು ಹೆಚ್ಚು ಅಧಿವೇಶನಗಳನ್ನು ಆಯೋಜಿಸಿ, “ಅಂತರರಾಷ್ಟ್ರೀಯ ವ್ಯವಹಾರವನ್ನು ಹೇಗೆ ನಡೆಸಬೇಕು” ವಿಷಯದ ಬಗ್ಗೆ ಪೂರ್ಣ ಮಾಹಿತಿಯನ್ನು ಕೊಡಲಾಗುವುದು.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವರು ನೋಂದಾಯಿಸಿಕೊಳ್ಳಬಹುದು ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ
ದೂರವಾಣಿ: 08022210644 / 9880958218 ಅಥವಾ ಇಮೇಲ್: vtpckarnataka@gmail.com

ವಿಟಿಪಿಸಿಯು ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಧೀನದಲ್ಲಿರುವ ಒಂದು ನೋಡಲ್ ಏಜೆನ್ಸಿಯಾಗಿದೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ