ಬಿಜೆಪಿ ನಾಯಕರಿಂದ ಪ್ರಧಾನಿಗೆ ಶುಭಾಶಯ ಮೋದಿ ಆಡಳಿತಕ್ಕೆ 20 ವರ್ಷ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿ ರಾಜಕೀಯಕ್ಕೆ ಧುಮುಕಿ ಬುಧವಾರಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಶುಭಾಶಯ ತಿಳಿಸಿದ್ದಾರೆ.
ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಅಲ್ಲದೆ, ಪ್ರಧಾನಿಯಾಗಿ ಆಡಳಿತ ನಡೆಸಿದ್ದೂ ಸೇರಿ ಯಶಸ್ವಿಯಾಗಿ ಆಡಳಿತ ನಡೆಸಿದ, ಒಂದೇ ಒಂದು ಸೋಲು ಕಾಣದಂತೆ ಅಭಿವೃದ್ಧಿ ಮಂತ್ರ ಪಠಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿದ್ದಾರೆ.
ನರೇಂದ್ರ ಮೋದಿ ಅವರು 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಅಕಾರ ವಹಿಸಿಕೊಂಡು, ಅಲ್ಲಿಂದ ಮೈಲಿಗಲ್ಲು ಸೃಷ್ಟಿಸುತ್ತ, ಅಭಿವೃದ್ಧಿಯ ಮಂತ್ರ ಪಠಿಸುತ್ತ, ದೇಶದ ಏಳಿಗೆಗೆ ಕಾರಣರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟ್ವೀಟ್ ಮಾಡಿದ್ದಾರೆ.
ಯಶಸ್ವಿ ಆಡಳಿತದಲ್ಲಿ 20 ವರ್ಷ ಪೂರೈಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆ. ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅಷ್ಟೇ, ಈಗ ಪ್ರಧಾನಿಯಾದರೂ ಅಷ್ಟೇ, ಜನರ ಕಲ್ಯಾಣವೊಂದನ್ನೇ ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದ್ದಾರೆ. ಹಾಗಾಗಿ ಇಂದು ಜಾಗತಿಕ ನಾಯಕರಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಶುಭಕೋರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ