ಮಾಸ್ಕ್ ದಂಡ ಇಳಿಕೆ

ಬೆಂಗಳೂರು: ಮಾಸ್ಕ್ ಧರಿಸದಿದ್ದರೆ ವಿಸುವ ಹೆಚ್ಚಿನ ದಂಡಕ್ಕೆ ರಾಜ್ಯದೆಲ್ಲಡೆ ವಿರೋಧ ವ್ಯಕ್ತವಾಗುತ್ತಿದ್ದಂತೆ ದಂಡದ ಪ್ರಮಾಣ ಇಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.
ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ 250 ರೂಪಾಯಿ ಹಾಗೂ ಗ್ರಾಮೀಣ ಭಾಗದಲ್ಲಿ 100ರೂಪಾಯಿ ದಂಡ ವಿಸುವಂತೆ ಆದೇಶಿಸಲಾಗಿದೆ. ಅಲ್ಲದೇ ಆದೇಶ ಪ್ರತಿಯಲ್ಲಿ ಸಾರ್ವಜನಿಕರು ಸ್ಯಾನಿಟೈಸರ್, ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಲಾಗಿದೆ.
ಕೊರೋನಾ ನಿಯಂತ್ರಣಕ್ಕಾಗಿ ನಗರ ಪ್ರದೇಶದಲ್ಲಿ 1000 ಹಾಗೂ ಗ್ರಾಮೀಣ ಭಾಗದಲ್ಲಿ 500 ರೂಪಾಯಿಗಳ ದಂಡ ವಿಸುವಂತೆ ಈ ಹಿಂದೆ ಆದೇಶಿಸಲಾಗಿತ್ತು. ಹೀಗಾಗಿ ರಾಜ್ಯಾದ್ಯಂತ ಕಾರ್ಯಪ್ರವೃತ್ತರಾದ ಪೋಲೀಸರು ಮಾಸ್ಕ್ ಧರಿಸದೇ ಇರುವವರನ್ನು ಪತ್ತೆ ಮಾಡಿ ದಂಡ ವಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಕೆಲಸವಿಲ್ಲದ ಸಂದರ್ಭದಲ್ಲಿ ಮಾಸ್ಕ್‍ಗೆ 1000ರೂಪಾಯಿ ದಂಡ ಹಾಕಿರುವುದುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ತಜ್ಞರೊಂದಿಗೆ ಸಭೆ ನಡೆಸಿ ದಂಡದ ಪ್ರಮಾಣ ಇಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ