ಭೀಮಾ -ಕೋರೆಗಾಂವ್ ಹಿಂಸಾಚಾರ ಪ್ರಕರಣ ಪಾದ್ರಿ ಸೇರಿ 8 ಮಂದಿ ವಿರುದ್ಧ ಚಾರ್ಜ್‍ಶೀಟ್

ಮುಂಬೈ: ಎರಡು ವರ್ಷದ ಹಿಂದೆ ಭೀಮಾ-ಕೋರೆಗಾಂವ್ ವಿಜಯೋತ್ಸವದ ಹೆಸರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ದಿಲ್ಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು , ಕೇರಳ ಮೂಲದ ಛತ್ತೀಸ್‍ಗಢದ ಪಾದ್ರಿ ಸ್ಟ್ಯಾನ್ ಸ್ವಾಮಿ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಂಟು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್‍ಗೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎನ್‍ಐಎ ವಕ್ತಾರೆ ಮತ್ತು ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್ ಸೋನಿಯಾ ನಾರಂಗ್ ಮಾಹಿತಿ ನೀಡಿದರು.
2018ರ ಜ. 1ರಂದು ಮಹಾರಾಷ್ಟ್ರದ ಪುಣೆ ಬಳಿಯ ಕೋರೆಗಾಂವ್‍ನಲ್ಲಿ ಭೀಮಾ-ಕೋರೆಗಾಂವ್ ಯುದ್ಧದ 200ನೇ ವರ್ಷದ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಒಬ್ಬ ಮೃತಪಟ್ಟು, 30 ಪೊಲೀಸರು ಗಾಯಗೊಂಡಿದ್ದರು.
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಸಿದಂತೆ ಪಾದ್ರಿ ಸ್ಟ್ಯಾನ್ ಸ್ವಾಮಿಯನ್ನು ಎನ್‍ಐಎ ರಾಂಚಿಯಲ್ಲಿ ಬಂಸಿದೆ. ಈ ಹಿಂದೆ ಎರಡು ಬಾರಿ ಸ್ವಾಮಿ ಅವರನ್ನು ಪ್ರಶ್ನಿಸಿರುವ ಪುಣೆ ಪೊಲೀಸ್ ಮತ್ತು ಎನ್‍ಐಎ ತಂಡ ಗುರುವಾರ ಅವರನ್ನು ರಾಂಚಿ ಮನೆಯಲ್ಲಿ ಬಂಸಿರುವುದು ಮಹತ್ವ ಪಡೆದಿದೆ.
ನಿಷೇತ ಸಿಪಿಐ(ಮಾವೊವಾದಿ) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈತನನ್ನು ಬಂಸಲಾಗಿದ್ದು, ಸ್ಟ್ಯಾನ್ ಸ್ವಾಮಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ ಹದಿನಾರು ವ್ಯಕ್ತಿಗಳನ್ನು ಬಂಸಲಾಗಿದೆ. ಐಪಿಸಿ ಸೆಕ್ಷನ್ ಮತ್ತು ಭಯೋತ್ಪಾದಕಾ ನಿಗ್ರಹ ಕಾಯ್ದೆ ಯುಪಿಎಪಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ