ಬಿಜೆಪಿ ಉಸ್ತುವಾರಿಗಳು

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಗೆ ಸಂಬಂಸಿದಂತೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ ಟೀಲು ಬಿಡುಗಡೆ ಮಾಡಿದರು.
ಶಿರಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವ ವಿ.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಸಂಸದರಾದ ಪಿ.ಸಿ.ಮೋಹನ್, ಎ.ನಾರಾಯಣ ಸ್ವಾಮಿ, ಪ್ರತಾಪ್‍ಸಿಂಹ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಎಂ.ರಾಜೇಂದ್ರ, ಮುಖಂಡ ತಿಪ್ಪೇಸ್ವಾಮಿಯವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಸಚಿವರಾದ ಆರ್. ಅಶೋಕ, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ್, ಶಾಸಕ ಮತ್ತು ಮಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ರಾಜ್ಯ ಕಾರ್ಯದರ್ಶಿ ಎಂ.ಸತೀಶ್‍ರೆಡ್ಡಿ, ಪಿ.ಮುನಿರಾಜು ಗೌಡರನ್ನು ನೇಮಿಸಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ