ಧರ್ಮೋತ್ಥಾನ ಟ್ರಸ್ಟ್, ಯುವಾ ಬ್ರಿಗೇಡ್‍ಗೆ ಪುರಸ್ಕಾರ 65 ಸಾಧಕ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಸಂಕೀರ್ಣ ವಿಭಾಗದಲ್ಲಿ ವಿ.ಲಕ್ಷ್ಮೀನಾರಾಯಣ (ನಿರ್ಮಾಣ್), ಸಂಘ-ಸಂಸ್ಥೆಗಳ ಕ್ಷೇತ್ರದಲ್ಲಿ ಯುತ್ ಫಾರ್ ಸೇವಾ, ಯುವಾ ಬ್ರಿಗೇಡ್, ಧರ್ಮೋತ್ಥಾನ ಟ್ರಸ್ಟ್ ಸೇರಿದಂತೆ ಒಟ್ಟು 65 ಗಣ್ಯರು ಹಾಗೂ ಸಂಘ-ಸಂಸ್ಥೆಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ. ರವಿ, ಪ್ರಸಕ್ತ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ 65 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
ಪ್ರತಿ ಬಾರಿ ನ.1 ರ ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಕೊಡಲಾಗುತ್ತಿತ್ತು. ಆದರೆ, ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ನ.7 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪುರಸ್ಕರಿಸಲಾಗುವುದು. ಕ್ರೀಡಾ ಕ್ಷೇತ್ರ ಬಿಟ್ಟು ಮಿಕ್ಕೆಲ್ಲಾ ಕ್ಷೇತ್ರದಿಂದಲೂ 60 ವರ್ಷ ಮೇಲ್ಪಟ್ಟ ಸಾಧಕರನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಅರ್ಹತೆ ಹಾಗೂ ಪ್ರಾದೇಶಿಕತೆಯನ್ನು ಗಮನದಲ್ಲಿಟ್ಟುಕೊಂಡು ಒಟ್ಟು 26 ಕ್ಷೇತ್ರಗಳಲ್ಲಿ ಜಿಲ್ಲೆಗೊಂದರಂತೆ ಪ್ರಶಸ್ತಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ