ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಾಲೆ ಪುನರ್ ಆರಂಭ ವಿಚಾರ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆ ಆರಂಭಿಸುವ ಕುರಿತು ಇನ್ನು ಚರ್ಚೆ ನಡೆಯಬೇಕಾಗಿದೆ. ಎಲ್ಲಾ ರೀತಿಯಲ್ಲಿ ಅವಲೋಕಿಸಿ ವರದಿಯನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಗುವುದು, ನಂತರ ಈ ಕುರಿತು ನಿರ್ಧರಿಸಲಾಗುವುದು ಎಂದರು. ಶಾಲೆ ಪುನರ್ ಆರಂಭ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ