ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವುದು ಹೆಮ್ಮೆಯ ವಿಷಯ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ. ಬಿಹಾರದ ಜನತೆಗೆ ಪ್ರಧಾನಮಂತ್ರಿ ಅವರು ಬರೆದಿರುವ ಬಹಿರಂಗ ಪತ್ರದಲ್ಲಿ, ಕೇಂದ್ರದಲ್ಲಿರುವ ಎನ್‍ಡಿಎ ಸರ್ಕಾರ ಹಾಗೂ ಬಿಹಾರದ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ವಿಶೇಷ ಪ್ರಯತ್ನಗಳಿಂದ ಬಿಹಾರ ಈ ದಶಕದಲ್ಲಿ ಅಭಿವೃದ್ಧಿಯ ಹೊಸ ಮೈಲುಗಲ್ಲು ಸಾಧಿಸಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಬಿಹಾರದ ಅಭಿವೃದ್ಧಿಗೆ ತಾವು ಬದ್ಧವಿರುವುದಾಗಿ ಪ್ರಧಾನಮಂತ್ರಿ ಹೇಳಿದ್ದಾರೆ. ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಬಿಹಾರ ಅಭಿವೃದ್ಧಿ ಕಂಡಿದೆ. ಈ ಸಂಬಂಧ ತನ್ನ ರಿಪೋರ್ಟ್ ಕಾರ್ಡ್‍ಅನ್ನು ಸಹ ಜನರ ಮುಂದಿಟ್ಟಿದೆ. ಎನ್‍ಡಿಎ ಸರ್ಕಾರ ಮಾತ್ರ ಬಿಹಾರದಲ್ಲಿ ಅಭಿವೃದ್ಧಿಯ ವೇಗವನ್ನು ಸುಸ್ಥಿರವಾಗಿ ಕಾಯ್ದುಕೊಳ್ಳಲಿದೆ ಎಂಬ ನಂಬಿಕೆ ಬಿಹಾರದ ಜನರಲ್ಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ವಿದ್ಯುತ್ಛ್‍ಕ್ತಿ, ನೀರು, ರಸ್ತೆ, ಶಿಕ್ಷಣ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಲಯಗಳಲ್ಲಿ ಬಿಹಾರದಲ್ಲಿ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಪತ್ರದಲ್ಲಿ ವಿವರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ