ರಾಜ್ಯದಲ್ಲಿ ಶಾಲಾ ತರಗತಿಗಳನ್ನು ಆರಂಭಿಸುವ ಕುರಿತು ನಾಳೆ ಶಾಲೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಆಯೋಜಿಸಲಾಗಿದೆ. ಪ್ರತಿ ತಾಲೂಕಿನಿಂದ ಗ್ರಾಮೀಣ ಭಾಗದ ಒಬ್ಬರು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ನಗರ ಪ್ರದೇಶದಿಂದ ಒಬ್ಬರು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಸಂಬಂಧಿಸಿದ ಶಾಲೆಯ ಮುಖ್ಯಸ್ಥರು, ಆಡಳಿತ ಮತ್ತು ಅಭಿವೃದ್ಧಿ ವಿಭಾಗದ ಉಪನಿರ್ದೇಶಕರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಲೆಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿ, ಅಗತ್ಯ ಸುರಕ್ಷತಾ ಕ್ರಮಗಳು, ಶಾಲೆ ನಡೆಯುವ ಅವಧಿ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ