ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ 3 ಲಕ್ಷ ಸಿಬ್ಬಂದಿಗೆ ರಾಜ್ಯದ ಆರು ಕೋಟಿ ಕನ್ನಡಿಗರ ಆರೋಗ್ಯವನ್ನು ಕಾಪಾಡುವ ಹೊಣೆಯನ್ನು ಇನ್ನಷ್ಟು ಉತ್ತಮವಾಗಿ ನಿಭಾಯಿಸುವ ಮೂಲಕ ಸಮೃದ್ಧ ಕರ್ನಾಟಕವನ್ನು ಆರೋಗ್ಯ ಕರ್ನಾಟಕವನ್ನಾಗಿಸಬೇಕು ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಡಿ 2.50 ಲಕ್ಷ ಸಿಬ್ಬಂದಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿ 30 ರಿಂದ 40 ಸಾವಿರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಎರಡು ಇಲಾಖೆಗಳು ಸೇರಿ ಒಟ್ಟು 3 ಲಕ್ಷ ಸಿಬ್ಬಂದಿ ರಾಜ್ಯದ 6 ಕೋಟಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಎಂದರು. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್ ನಿಯಂತ್ರಿಸಲಾಗಿದೆ. ಕಳೆದ ಹತ್ತು ಹನ್ನೆರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.
Related Articles
ಧಾರವಾಡಕ್ಕೆ ವಿಶೇಷ ತಂಡ
October 9, 2020
Varta Mitra News - SP
ಧಾರವಾಡ, ರಾಷ್ಟ್ರೀಯ, ಸಿಎಂ ಹೆಚ್ಡಿಕೆ
Comments Off on ಧಾರವಾಡಕ್ಕೆ ವಿಶೇಷ ತಂಡ
Seen By: 75 ಧಾರವಾಡ ಜಿಲ್ಲೆಯಲ್ಲಿ ಮರಣ ಪ್ರಮಾಣ ಹೆಚ್ಚಳವಾದ ಹಿನ್ನಲೆ ಅಲ್ಲಿಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಲ್ಲಿ ಆಗಿರುವ ತಪ್ಪುಗಳನ್ನು [more]