ನಾಳೆ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಈ ಎರಡೂ ಕ್ಷೇತ್ರಗಳಿಗೆ ನವೆಂಬರ್ 3ರಂದು ಮತದಾನ ನಡೆದಿತ್ತು. ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಬೆಂಗಳೂರಿನ ಆರ್.ಆರ್. ನಗರದ ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ್ ಶಾಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮತಯಂತ್ರಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್‍ನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ