ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಅಧಿಸೂಚಿತ ಬೆಳೆಯನ್ನು ನೋಂದಾಯಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಯಾಂಕ್‍ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಚಿಕ್ಕಮಗಳೂರು ತೋಟಗಾರಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ ಕಡೂರು ತಾಲ್ಲೂಕಿನ ರೈತರಿಗೆ ಮಳೆಯಾಶ್ರಿತ ಟೊಮೊಟೊ ಬೆಳೆ ನೋಂದಾಣಿಗೆ ನವೆಂಬರ್ 30 ಅಂತಿಮ ದಿನವಾಗಿದ್ದು, ರೈತರು ಪ್ರತಿ ಹೆಕ್ಟರ್‍ಗೆ 1 ಲಕ್ಷ 18 ಸಾವಿರ ವಿಮಾ ಮೊತ್ತವನ್ನು ಹಾಗೂ 5 ಸಾವಿರ 900 ವಿಮಾ ಕಂತನ್ನು ಪಾವತಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ