ಈ ಬಾರಿ ದೇಶದ ಜನತೆ ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವ ಮೂಲಕ ದೀಪಾವಳಿ ಆಚರಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳ ಮೂಲಕ ದೀಪಾವಳಿ ಎಂಬ ಘೋಷವಾಕ್ಯದಡಿ ಜನತೆ ಸ್ಥಳೀಯ ಉತ್ಪನ್ನಗಳನ್ನು ಬಳಸಿ ಹಬ್ಬ ಆಚರಿಸಬೇಕೆಂದು ಹೇಳಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ 30 ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಪೂರ್ವಾಂಚಲ ಭಾಗದ ರೈತರು ಅತಿ ಹೆಚ್ಚು ಉತ್ಪನ್ನಗಳನ್ನು ಈ ಬಾರಿ ಬೆಳೆದಿದ್ದು, ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಅದರಲ್ಲೂ ಪ್ರಮುಖವಾಗಿ ವಾರಾಣಸಿ ಆರೋಗ್ಯ ಸೌಲಭ್ಯಗಳ ಕೇಂದ್ರವಾಗಿ ಹೊರಹೊಮ್ಮಿದೆ. ಕೇವಲ ಪೂರ್ವಾಂಚಲ ಭಾಗವಷ್ಟೇ ಅಲ್ಲದೆ, ಇಡೀ ದೇಶಕ್ಕೆ ವಾರಾಣಸಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ನಗರವಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಶಿನಗರದಲ್ಲಿ ಪ್ರಸ್ತುತ 8 ಸಾವಿರದ 900 ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈವರೆಗೆ 18 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳು ಮಂಜೂರಾಗಿವೆ ಎಂದು ಹೇಳಿದರು.
Related Articles
ಬಿಹಾರದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ಧಿಗೆ ಬದ್ಧ
November 2, 2020
Varta Mitra News - SP
ರಾಷ್ಟ್ರೀಯ, ಪ್ರಧಾನಿ ಮೋದಿ, ಅಂತರರಾಷ್ಟ್ರೀಯ
Comments Off on ಬಿಹಾರದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ಧಿಗೆ ಬದ್ಧ
Seen By: 56 ಛಪ್ರಾ: ಬಿಹಾರದ ಡಬಲ್ ಎಂಜಿನ್ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿಧಾರೆ. ಛಪ್ರಾದಲ್ಲಿ ಚುನಾವಣಾ ಪ್ರಚಾರ ರ್ಯಾಲಿ [more]
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ
November 2, 2020
Varta Mitra News - SP
ರಾಷ್ಟ್ರೀಯ, ಕಾರ್ಯಕ್ರಮಗಳು
Comments Off on ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ
Seen By: 72 ಹೊಸದಿಲ್ಲಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಕನ್ನಡದ ಶುಭಾಶಯ ಕೋರಿಧಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ [more]
Seen By: 67 ಜಾಗತಿಕ ಬಂಡವಾಳ ಹೂಡಿಕೆ ದುಂಡು ಮೇಜಿನ ವರ್ಚುಯಲ್ ಸಭೆ ನಾಳೆ ಆಯೋಜಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಹೂಡಿಕೆ [more]